ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೇಂದ್ರ-ರಾಜ್ಯ ಸರ್ಕಾರ ನೀತಿ ವಿರುದ್ಧ ಹೋರಾಡ್ಬೇಕು: ಬರ್ದನ್ (UPA | Congress | BJP | CPIM | JDS)
Bookmark and Share Feedback Print
 
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ವಿರುದ್ಧ ಜಾತ್ಯತೀತ ಪ್ರಜಾಸತ್ತಾತ್ಮಕ ಹಾಗೂ ಎಡಪಕ್ಷಗಳು ಒಗ್ಗೂಡಿ ಹೋರಾಟ ಮಾಡಬೇಕೆಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ.ಬಿ.ಬರ್ದನ್ ಕರೆ ನೀಡಿದ್ದಾರೆ.

ಪಕ್ಷದ 84ನೇ ಸಂಸ್ಥಾಪನಾ ದಿನಾಚರಣೆ ಹಾಗೂ ರಾಷ್ಟ್ರೀಯ ಮಂಡಳಿ ಸಭೆ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ದೇಶದಲ್ಲಿ ಪರ್ಯಾಯ ರಾಜಕೀಯ ಪಕ್ಷ ಹುಟ್ಟುಹಾಕಬೇಕಾದ ಅಗತ್ಯವಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿಲ್ಲ. ದುಡಿಯುವ ವರ್ಗದವರ ಪರವಾಗಿಲ್ಲ. ಜಾತ್ಯತೀತ ಮನೋಭಾವದ ರಾಜಕೀಯ ಪಕ್ಷಗಳು ದುಡಿಯುವ ವರ್ಗದ ಏಳಿಗೆಗೆ ಶ್ರಮಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ಎಇಝಡ್ ಹೆಸರಲ್ಲಿ ಕೃಷಿ ಭೂಮಿಯನ್ನು ನಾಶ ಮಾಡುತ್ತಿದೆ. ಕಾರ್ಮಿಕರ ವಿರುದ್ಧ ಹಾಗೂ ಮಾಲೀಕರ ಪರವಾದ ನಿಲುವನ್ನು ತಳೆದಿದೆ. ರಾಜ್ಯ ಸರ್ಕಾರಗಳು ಜನರ ಸಮಸ್ಯೆಯನ್ನು ಮನಗಂಡು ಬಗೆಹರಿಸುವ ಬದಲು ಆಂತರಿಕ ರಾಜಕೀಯದಲ್ಲಿ ಮುಳುಗಿವೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ