ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಜೆಡಿಎಸ್ ಜೊತೆ ಕೈ ಜೋಡಿಸಬಹುದು ಅಥವಾ ಇಲ್ಲದೇ ಇರಬಹುದು ಎಂದು ಜನತಾ ಪರಿಹಾರದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.
ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಬಗ್ಗೆ ಅವರು ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಬಗ್ಗೆ ತಮಗೆ ಭಿನ್ನಾಭಿಪ್ರಾಯವಿಲ್ಲ. ಅವರು ತಮ್ಮ ಪಕ್ಷಕ್ಕೆ ಬಂದರೆ ನಮಗೆ ಸಂತೋಷ. ಬೇಡ ಎನ್ನುವ ಪ್ರಶ್ನೆಯೇ ಇಲ್ಲ ಎಂದರು. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ ಎಂದು ರೇವಣ್ಣ ಇದೇ ಸಂದರ್ಭದಲ್ಲಿ ಹೇಳಿದರು.