ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಕಂಟಕ ಎದುರಾಗದೆ. ಪಕ್ಷದೊಳಗಿನ ಕಚ್ಚಾಟ ಶಮನವಾಗಿದೆ ಎಂಬ ಹೇಳಿಕೆಯ ನಡುವೆಯೇ ಭಿನ್ನಮತೀಯ ಶಾಸಕರು ಮತ್ತೊಮ್ಮೆ ಪ್ರತ್ಯೇಕ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಕೂಡ ಭಾಗವಹಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಮದಾಸ್ ಖುದ್ದು ಈ ವಿಚಾರವನ್ನು ತಿಳಿಸಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಭಿನ್ನಮತೀಯ ಶಾಸಕರ ಸಭೆ ನಡೆಯುತ್ತಿದ್ದು, ಇದರಲ್ಲಿ ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಪಕ್ಷದ ಉಳಿವಿಗಾಗಿ ನಡೆಯುವ ಪ್ರತಿ ಸಭೆಗಳಲ್ಲೂ ತಾನು ಸಕ್ರೀಯವಾಗಿ ಭಾಗಿಯಾಗುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು. ವಿಧಾನಸಭಾ ಅಧಿವೇಶನ ಕಾರ್ಯಕಲಾಪದಿಂದಲೂ ಸಹ ಭಿನ್ನಮತೀಯ ಶಾಸಕರು ದೂರ ಉಳಿಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಒಡೆದ ಮನೆಯಾಗಿರುವ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಆರಂಭಗೊಂಡಿದೆ.