ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲಂಚ ಸ್ವೀಕಾರ-ಎಚ್‌ಡಿಕೆ ಆರೋಪಕ್ಕೆ ದೇಶಪಾಂಡೆ ಗರಂ (Kumaraswamy | Desh pandy | KPCC | JDS)
Bookmark and Share Feedback Print
 
NRB
ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಹಣ ಪಡೆದು ಸರ್ಕಾರದ ಭ್ರಷ್ಟಾಚಾರಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ತೀವ್ರವಾಗಿ ಖಂಡಿಸಿದ್ದಾರೆ.

ಸಾಂಸ್ಥಿಕ ಚುನಾವಣೆ ಕುರಿತು ಪಕ್ಷದ ಕಚೇರಿಯಲ್ಲಿ ನಡೆದ ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರ ಸಭೆ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, ಉನ್ನತ ಸ್ಥಾನದಲ್ಲಿರುವವರು ಘನತೆಗೆ ತಕ್ಕಂತೆ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ಸಿಎಂ ಅವರಿಂದ ಯಾರು ಹಣ ಪಡೆಯುತ್ತಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಕ್ಷಮೆ ಯಾಚಿಸಲಿ. ಅವರ ಈ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮಾಡಿರುವ ಅವಮಾನ ಎಂದು ದೇಶಪಾಂಡೆ ಕಿಡಿಕಾರಿದರು.
ಸಂಬಂಧಿತ ಮಾಹಿತಿ ಹುಡುಕಿ