ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಧಾನಿಗೆ ಬಿಡುವು ಇಲ್ಲವಂತೆ: ಯಡಿಯೂರಪ್ಪ ಕಿಡಿ (Manmohan Singh | Bangalore | Karnataka | Yeddyurappa)
Bookmark and Share Feedback Print
 
ಪ್ರಧಾನ ಮಂತ್ರಿಗಳ ಸಂಪರ್ಕಕ್ಕೆ ಸಜ್ಜುಗೊಂಡು ರಾಜ್ಯ ಸರ್ವಪಕ್ಷಗಳ ನಿಯೋಗಕ್ಕೆ ಸಮಯವನ್ನೇ ನೀಡದ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುವಂತೆ ಪ್ರಧಾನಿ ಕಚೇರಿ ನಡೆದುಕೊಳ್ಳುತ್ತಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಒಂದು ರಾಜ್ಯದ ಮುಖ್ಯಮಂತ್ರಿ ಸರ್ವಪಕ್ಷಗಳ ಸದಸ್ಯರೊಂದಿಗೆ ರಾಜ್ಯದ ಜಲವಿವಾದ ಕುರಿತು ಚರ್ಚಿಸಲು ಪ್ರಧಾನಿ ಸಮಯ ನೀಡದೇ ಇರುವುದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೇ ಮೊದಲು ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಪ್ರಧಾನಿ ಕಚೇರಿಯ ಈ ನಿಲುವು ಪಕ್ಷಪಾತದಿಂದ ಕೂಡಿದೆ ಎಂದು ಹೇಳಲು ವಿಷಾದಿಸುತ್ತೇನೆ ಎಂದು ಯಡಿಯೂರಪ್ಪ ತಮ್ಮ ನೋವನ್ನು ಹೊರಹಾಕಿದರು.

ಕಳಸಾ ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ ಚರ್ಚಿಸಲು ರಾಜ್ಯ ಸರ್ಕಾರದ ನಿಯೋಗ ಪ್ರಧಾನಿ ಭೇಟಿಗೆ ಹೋಗುವುದಾಗಿ ನಿರ್ಧರಿಸಿತ್ತು. ಆದರೆ ಪ್ರಧಾನಿ ಕಚೇರಿ ಸಮಯ ನೀಡದ ಕಾರಣ ಯಡಿಯೂರಪ್ಪ ಕಿಡಿಯಾಗಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ