ರೆಡ್ಡಿ ಸಹೋದರರ ಒಡೆತನದ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿರುವ ಓಬಳಾಪುರಂ ಗಣಿ ಕಂಪನಿಗೆ ನೀಡಿದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮತ್ತೆ ಮುಂದುವರಿಸಿದೆ.
ಆದರೆ ಆಂಧ್ರಪ್ರದೇಶ ಹೈಕೋರ್ಟ್ ಈ ಸಂಬಂಧವಾಗಿ ಸರಿಯಾದ ಸಂದರ್ಭದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ಗುರುವಾರ ಆದೇಶಿಸಿದೆ.
ಓಎಂಸಿ ಮತ್ತು ಆಂಧ್ರಪ್ರದೇಶ ಸರ್ಕಾರ ಗಣಿ ವಿಚಾರವಾಗಿ ಮಾರ್ಗದರ್ಶನ ನೀಡಲು ಕೋರಿದ ಬೆನ್ನಲ್ಲಿ ಈ ಆದೇಶವನ್ನು ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ನೇತೃತ್ವದ ಪೀಠ ನೀಡಿದೆ. ಜನವರಿ 18ಕ್ಕೆ ಪ್ರಕರಣದ ವಿಚಾರಣೆ ಮುಂದೂಡಲಾಗಿದ್ದು, ವ್ಯಾಜ್ಯಕ್ಕೆ ಸಂಬಂಧಪಟ್ಟ ವ್ಯಕ್ತಿಗಳು ಹೈಕೋರ್ಟ್‌ಗೆ ಹಾಜರಾಗುವಂತೆ ನಿರ್ದೇಶಿಸಿದೆ.
ಆಂಧ್ರಪ್ರದೇಶ ಸರ್ಕಾರ ನಿಷೇಧಿತ ಪ್ರದೇಶದಲ್ಲಿಯೂ ಗಣಿಗಾರಿಕೆ ಮುಂದುವರಿಸಲು ನೀಡಿರುವ ಆದೇಶವನ್ನು ತಡೆ ಹಿಡಿದಿತ್ತು. ಸುಪ್ರೀಂಕೋರ್ಟ್ ರಚಿಸಿದ ಸಮಿತಿಯು ನಿಷೇಧಿತ ಪ್ರದೇಶದಲ್ಲಿಯೂ ಗಣಿಗಾರಿಕೆ ನಡೆಯುತ್ತಿದೆ ಎಂದು ವರದಿ ನೀಡಿದ ಹಿನ್ನಲೆಯಲ್ಲಿ ಕೋರ್ಟ್ ಈ ಆದೇಶ ನೀಡಿತ್ತು.