ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಮೀಸಲಾತಿ-ಸುಪ್ರೀಂನಿಂದ ವಿಚಾರಣೆ ಮುಂದಕ್ಕೆ (BBMP | High court | Supreme court | Congress)
Bookmark and Share Feedback Print
 
ಬಿಬಿಎಂಪಿ ಮೀಸಲಾತಿ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಸರ್ವೋಚ್ಛ ನ್ಯಾಯಾಲಯ ಜನವರಿ22ಕ್ಕೆ ಮುಂದೂಡಿದೆ.

ಬಿಬಿಎಂಪಿ ಚುನಾವಣೆ ಮೀಸಲಾತಿ ಸರಿ ಇಲ್ಲ ಎಂದು ಸುಪ್ರೀಂಕೋರ್ಟ್‌ಗೆ ರಮೇಶ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು 22ಕ್ಕೆ ಮುಂದೂಡಿದೆ.

ಹಾಗಾಗಿ ಚುನಾವಣೆ ದಿನಾಂಕ ಪ್ರಕಟವಾಗಿ ನೀತಿ ಸಂಹಿತೆ ಜಾರಿಯಾಗಿದ್ದರೂ ಅನಿಶ್ಚಿತತೆ ಮುಂದುವರಿದಿದೆ. ಶುಕ್ರವಾರದಿಂದ ನೀತಿ ಸಂಹಿತೆ ಜಾರಿಗೊಂಡಿರುವುದಾಗಿ ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಫೆಬ್ರುವರಿ 21ಕ್ಕೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ