ನೈಸ್ ಯೋಜನೆಯ ಹೆಸರಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ರೈತರ ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದು, ಕೂಡಲೇ ಅದನ್ನು ಹಿಂದಿರುಗಿಸುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಯೋಜನೆಯಲ್ಲಿ ಸರ್ಕಾರ ಸಾಕಷ್ಟು ತಪ್ಪೆಸಗಿದೆ. ನೈಸ್ ಯೋಜನೆಗೆ ನಮ್ಮ ವಿರೋಧವಿಲ್ಲ. ಆಗತ್ಯಕ್ಕೆ ಅನುಗುಣವಾಗಿ ಭೂಮಿಯನ್ನು ನೀಡಲಿ. ಆದರೆ ವಿನಾಕಾರಣ ಫಲವತ್ತಾದ ಭೂಮಿಯನ್ನು ಬಲವಂತವಾಗಿ ರೈತರಿಂದ ಕಸಿದುಕೊಳ್ಳುವುದನ್ನು ನಾವು ವಿರೋಧಿಸುತ್ತೇವೆ. ಇದರ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು.
ಬಿಜೆಪಿಯು ಬಿಬಿಎಂಪಿಯ ರಾತ್ರಿ ಟೆಂಡರ್ ನಡೆಸಿದ್ದು ತಪ್ಪು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.