ಬಿಬಿಎಂಪಿ ಟೆಂಡರ್ ಪ್ರಕ್ರಿಯೆ ವಿಷಯದಲ್ಲಿ ಪ್ರತಿಪಕ್ಷಗಳು ವಿವಾದ ಸೃಷ್ಟಿಸಿ, ಜನರನ್ನು ತಪ್ಪು ದಾರಿಗೆ ಎಳೆಯುವ ಹುನ್ನಾರ ನಡೆಸುತ್ತಿವೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್‌ಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದ್ದಾರೆ.
ಭಾನುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಅವರು, ಬಿಬಿಎಂಪಿ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಅವ್ಯವಹಾರವಾಗಿಲ್ಲ. ಎಲ್ಲವೂ ಪಾರದರ್ಶಕವಾಗಿದೆ. ಇ-ಟೆಂಡರ್ ಮೂಲಕ ಟೆಂಡರ್ ಕರೆಯಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಆದರೆ ವಿರೋಧ ಪಕ್ಷಗಳ ಮುಖಂಡರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಪ್ರತಿಪಕ್ಷ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.