ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ಆದ್ಯತೆ: ಯಡಿಯೂರಪ್ಪ (Yeddyurappa | BJP | Budget | Congress | JDS)
Bookmark and Share Feedback Print
 
ಮೂಲ ಸೌಕರ್ಯ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಗ್ರಾಮೀಣಾಭಿವೃದ್ಧಿಗೆ ಈ ಬಾರಿಯ ಬಜೆಟ್‌ನಲ್ಲಿ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಲೂಕಿನ ವರೂರಿನ ನವಗ್ರಹ ತೀರ್ಥದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಧಾರವಾಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಸಿದ್ದತಾ ಕಾರ್ಯ ಈಗಿನಿಂದಲೇ ನಡೆದಿದೆ ಎಂದರು.

ಈ ಬಾರಿಯ ಬಜೆಟ್‌ನಲ್ಲಿ ಮೂಲ ಸೌಕರ್ಯ, ಶಿಕ್ಷಣ,ಕೃಷಿ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿಗೆ ಮೊದಲ ಆದ್ಯತೆ ನೀಡುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದ ಸಚಿವರು, ಅಧಿಕಾರಿಗಳು ಬೇರೆ, ಬೇರೆ ರಾಜ್ಯಗಳಲ್ಲಿನ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಬಂದಿದ್ದಾರೆ.

ಅವೆಲ್ಲವನ್ನೂ ಕ್ರೋಡಿಕರಿಸಿ ಜನವರಿ ತಿಂಗಳ ಅಂತ್ಯದೊಳಗೆ ಮತ್ತೆ ಸಚಿವರು, ಅಧಿಕಾರಿಗಳ ಸಭೆ ನಡೆಸಿ ಬಜೆಟ್ ಕುರಿತಂತೆ ಎಲ್ಲ ಮಾಹಿತಿ ಕಲೆ ಹಾಕಿ, ರಾಜ್ಯಕ್ಕೆ ಈ ಬಾರಿ ಉತ್ತಮ ಬಜೆಟ್ ನೀಡುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ