ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇಲ್ಮನೆ ಪ್ರತಿಪಕ್ಷ ನಾಯಕರಾಗಿ ಎಂ.ಸಿ.ನಾಣಯ್ಯ? (JDS | Congress | BJP | Nanayya | Deve gowda,)
Bookmark and Share Feedback Print
 
ಮೇಲ್ಮನೆ ಮೂವರು ಸದಸ್ಯರು ಇಂದು(ಜ.20) ನಿವೃತ್ತಿಯಾಗುವುದರೊಂದಿಗೆ ಸಂಖ್ಯಾಬಲದಲ್ಲಿ ಕಾಂಗ್ರೆಸ್ 3ನೇ ಸ್ಥಾನಕ್ಕೆ ಕುಸಿಯಲಿದೆ. ಆ ನಿಟ್ಟಿನಲ್ಲಿ ವಿರೋಧ ಪಕ್ಷ ನಾಯಕನ ಸ್ಥಾನ ಜೆಡಿಎಸ್ ತೆಕ್ಕೆಗೆ ಬೀಳಲಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್‌ನ ವಿ.ಎಸ್.ಉಗ್ರಪ್ಪ ನಿವೃತ್ತಿಯಾಗಿದ್ದರು. ಬಳಿಕ ಪ್ರತಿಪಕ್ಷ ನಾಯಕಿಯಾಗಿ ಕಾಂಗ್ರೆಸ್‌ನ ಮೋಟಮ್ಮ ಅವರನ್ನು ಹೈಕಮಾಂಡ್ ಸೂಚನೆ ಮೇರೆಗೆ ಆಯ್ಕೆ ಮಾಡಲಾಗಿತ್ತು. ಇದೀಗ ಮೂವರು ಸದಸ್ಯರ ನಿವೃತ್ತಿಯಿಂದ ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ 19ರಿಂದ 16ಕ್ಕೆ ಇಳಿಯಲಿದೆ. ಈ ಕಾರಣದಿಂದ ಮೋಟಮ್ಮ ಅಧಿಕಾರ ಕಳೆದುಕೊಳ್ಳಲಿದ್ದು, ಆ ಸ್ಥಾನಕ್ಕೆ 17ಸದಸ್ಯರನ್ನು ಹೊಂದಿರುವ ಜೆಡಿಎಸ್ ಪ್ರತಿಪಕ್ಷ ನಾಯಕ ಸ್ಥಾನ ಪಡೆಯಲಿದೆ.

ಬುಧವಾರದಂದು ಮೇಲ್ಮನೆಗೆ ನಾಮಕರಣಗೊಂಡಿದ್ದ ಕಾಂಗ್ರೆಸ್‌ನ ಮಲ್ಲಾಜಮ್ಮ, ಪ್ರಕಾಶ್ ಕೆ.ರಾಥೋಡ್ ಹಾಗೂ ಡಾ.ಚಂದ್ರಶೇಖರ ಕಂಬಾರ ಅಧಿಕಾರಾವಧಿ ಅಂತ್ಯಗೊಳ್ಳಲಿದೆ.

ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಲ್ಲಿ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಎಂ.ಸಿ.ನಾಣಯ್ಯ ಅಥವಾ ಬಸವರಾಜ ಹೊರಟ್ಟಿ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಹಾಗಾಗಿ ಪಕ್ಷದ ವರಿಷ್ಠರಾದ ದೇವೇಗೌಡ, ಕುಮಾರಸ್ವಾಮಿ ಅವರು ಮಾತುಕತೆ ನಡೆಸುವ ಮೂಲಕ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ