ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿ.ಟಿ. ಬದನೆ ರಾಜ್ಯಕ್ಕೆ ಬೇಡವೇ ಬೇಡ: ಯಡಿಯೂರಪ್ಪ (BJP | Yeddyurappa | UPA | Jairam Ramesh)
Bookmark and Share Feedback Print
 
ಬಿ.ಟಿ.ಬದನೆ ಬೆಳೆಗೆ ಅವಕಾಶ ನೀಡುವುದರಿಂದ ರೈತರ ಮಾರಣಹೋಮ ನಡೆಯಬಹುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಶೀಘ್ರವೇ ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಿಕೊಡಲಾಗುವುದು ಎಂದರು.

ಅವರು ಶನಿವಾರ ಸ್ವಾತಂತ್ರ್ಯ ಸೇನಾನಿ ಸುಭಾಶ್ಚಂದ್ರ ಬೋಸ್ ಅವರ 113ನೇ ಜನ್ಮದಿನದ ಅಂಗವಾಗಿ ಬೋಸ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿ.ಟಿ.ಬದನೆ ಜನರಲ್ಲಿ ಆತಂಕದ ವಾತಾವರಣ ಮೂಡಿಸಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಆದರೆ ಬಿ.ಟಿ.ಬದನೆ ಬೆಳೆಗೆ ಅವಕಾಶ ನೀಡುವುದಕ್ಕೆ ಸಂಬಂಧಪಟ್ಟಂತೆ ತಜ್ಞರ ಶಿಫಾರಸ್ಸೇ ಅಂತಿಮ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಹೇಳಿಕೆ ನೀಡಿದ್ದರು. ಏತನ್ಮಧ್ಯೆ ಪರಿಸರ ಸಚಿವ ಜೈರಾಮ್ ರಮೇಶ್ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಗೊಂದಲ ಉಂಟಾಗಿದೆ.

ತಜ್ಞರ ಸಮಿತಿ ಕಾನೂನುಬದ್ಧತೆಗೆ ಒಳಪಟ್ಟಿದ್ದರೂ ನಾಗರಿಕರ ಸುರಕ್ಷತೆಗೆ ಸಂಬಂಧಪಟ್ಟ ಮಹತ್ವದ ವಿಷಯಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಎಲ್ಲಾ ಅಧಿಕಾರವೂ ಸರ್ಕಾರಕ್ಕೆ ಇದೆ ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ