ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದಲ್ಲಿ 35ಅಕ್ರಮ ಪದವಿ ಕಾಲೇಜು: ಲಿಂಬಾವಳಿ (Karnataka | Aravinda Limbavali | BJP | Collage | Bangalore)
Bookmark and Share Feedback Print
 
ರಾಜ್ಯದಲ್ಲಿ ಅನೇಕ ವರ್ಷಗಳಿಂದ ಕಾನೂನು ಬಾಹಿರವಾಗಿ ನಡೆಯುತ್ತಿರುವ ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟ್ ಸೇರಿದಂತೆ ವಿವಿಧ ಕೋರ್ಸ್‌ಗಳ ಸುಮಾರು 35 ಪದವಿ ಕಾಲೇಜುಗಳನ್ನು ಸರ್ಕಾರ ಪತ್ತೆ ಹಚ್ಚಿರುವ ಅಂಶ ಬಹಿರಂಗಗೊಂಡಿದೆ.

ಇದರಲ್ಲಿ ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಸ್ಕೂಲ್ ಆಫ್ ಅಡ್ವಾನ್ಸಡ್ ಸ್ಟಡೀಸ್, ಭಾರತೀಯ ವಿದ್ಯಾಭವನದಲ್ಲಿರುವ ಎಂ.ಪಿ.ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಕೇಟರಿಂಗ್ ಸ್ಟಡೀಸ್ ಅಂಡ್ ಹೋಟೆಲ್ ಅಡ್ಮಿನಿಸ್ಟ್ರೇಷನ್‌ನಂಥ ಪ್ರತಿಷ್ಠಿತ ಕಾಲೇಜುಗಳೂ ಸೇರಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಸರ್ಕಾರದಿಂದ ಮಾನ್ಯತೆ ಪಡೆಯದಿರುವ ಅಂಥ ಕಾಲೇಜುಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಕಾಲೇಜು ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕಾಲೇಜುಗಳಿಗೆ ಎರಡು ಬಾರಿ ನೋಟಿಸ್ ನೀಡಿದ್ದರೂ ಉತ್ತರ ಬರದೇ ಇದ್ದುದರಿಂದ ಅನಿವಾರ್ಯವಾಗಿ ಕಠಿಣ ಕ್ರಮಕ್ಕೆ ಮುಂದಾಗಬೇಕಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಅಕ್ರಮ ಕಾಲೇಜುಗಳು ಕೂಡಲೇ ಸರ್ಕಾರದಿಂದ ಮಾನ್ಯತೆ ಪಡೆಯದಿದ್ದರೆ ಮುಚ್ಚಿಸುವುದಕ್ಕೆ ಯಾವುದೇ ಮುಲಾಜಿಲ್ಲ. ಅಗತ್ಯಬಿದ್ದರೆ ಪೊಲೀಸ್ ನೆರವನ್ನೂ ಪಡೆಯಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ