ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಈಶ್ವರಪ್ಪ ರಾಜ್ಯಾಧ್ಯಕ್ಷರಾದ್ರೆ ಸರ್ಕಾರ ಪತನ: ಸಿದ್ದು (Siddaramaiah | Ishwarappa | Congress | Mangalore)
Bookmark and Share Feedback Print
 
NRB
ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಂದು ಪುನರುಚ್ಚರಿಸಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಒಂದು ವೇಳೆ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಾಧ್ಯಕ್ಷರಾದಲ್ಲಿ ಬಿಜೆಪಿ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಕೇವಲ ಭರವಸೆಗಳನ್ನೇ ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ದೂರಿದರು.

ಇಂಧನ ಸಚಿವ ಈಶ್ವರಪ್ಪ ಕೂಡ ಕೇವಲ ಆಶ್ವಾಸನೆಗಳನ್ನು ನೀಡುವ ವ್ಯಕ್ತಿ ಎಂದು ಲೇವಡಿ ಮಾಡಿದ ಸಿದ್ದರಾಮಯ್ಯ, ಮುಂಗೋಪ ಸ್ವಭಾವ ಹೊಂದಿರುವ ಅವರಿಗೆ ಪಕ್ಷ ಸಂಘಟನೆ ಮಾಡುವ ವರ್ಚಸ್ಸು ಇಲ್ಲ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಈಶ್ವರಪ್ಪ ಹಠತೊಟ್ಟು ಪಕ್ಷದ ರಾಜ್ಯಾಧ್ಯಕ್ಷರಾದರೆ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಅಲ್ಲದೇ ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ, ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ