ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿದ್ಯುತ್ ಖರೀದಿಗೆ 330ಕೋಟಿ ರೂ.: ಈಶ್ವರಪ್ಪ (Ishwarappa | BJP | Yeddyurappa | Shivmoga | Karnataka)
Bookmark and Share Feedback Print
 
ರಾಜ್ಯದಲ್ಲಿ ತಲೆದೋರಿರುವ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಹಾಗೂ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ವಿದ್ಯುತ್ ಖರೀದಿ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಗೆ ನೀಡಿದ್ದಾರೆಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ವಿಶೇಷ ಸಭೆ ನಡೆಸಿದರು. ಈ ಸಭೆಯಲ್ಲಿ ಫೆಬ್ರುವರಿ, ಮಾರ್ಚ್, ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಖರೀದಿ ಮಾಡಲು 330ಕೋಟಿ ರೂ.ನೀಡಲು ನಿರ್ಧರಿಸಿದ್ದಾರೆಂದು ಮಾಹಿತಿ ನೀಡಿದರು.

ತಿಂಗಳಿಗೆ ತಲಾ 110ಕೋಟಿ ರೂ.ವೆಚ್ಚದಲ್ಲಿ 450ಮೆಗಾವ್ಯಾಟ್ ವಿದ್ಯುತ್ ಖರೀದಿ ಮಾಡಲಾಗುವುದು. ಜನವರಿ 28ರೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಫೆಬ್ರುವರಿ 1ರಿಂದ ಬೆಳಿಗ್ಗೆ 5ರಿಂದ 7ಗಂಟೆಯವರೆಗೆ, ಸಂಜೆ 7ರಿಂದ ರಾತ್ರಿ 11ಗಂಟೆಯವರೆಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ನೀಡಿದ್ದ ಭರವಸೆಯಂತೆ ಸರ್ಕಾರ ನಡೆದುಕೊಂಡಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ