ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೆರೆ ಸಂತ್ರಸ್ತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಉಗ್ರಪ್ಪ (Flood relief | Karnataka | VS Ugrappa | Yediyurappa)
Bookmark and Share Feedback Print
 
ಉತ್ತರ ಕರ್ನಾಟಕದಲ್ಲಿ ನೆರೆ ಸಂಭವಿಸಿ ನಾಲ್ಕ ತಿಂಗಳು ಕಳೆದರೂ ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಬದ್ಧತೆ ಅಥವಾ ಪ್ರಾಮಾಣಿಕತೆ ತೋರದ ರಾಜ್ಯ ಸರ್ಕಾರದ ಧೋರಣೆಯನ್ನು ವಿಧಾನ ಪರಿಷತ್ತಿನ ವಿರೋಧಪಕ್ಷದ ಮಾಜಿ ನಾಯಕ ವಿ.ಎಸ್. ಉಗ್ರಪ್ಪ ತೀವ್ರವಾಗಿ ಆಕ್ಷೇಪಿಸಿದ್ದಾರೆ.
PTI


ಶಂಕುಸ್ಥಾಪನೆ, ಪಟ್ಟಾಭಿಷೇಕದಂತಹ ಕಾರ್ಯಕ್ರಮಗಳಿಗೆ ದುಂದುವೆಚ್ಚ ಮಾಡುತ್ತಾ ಕಾಲಹರಣ ಮಾಡುತ್ತಿರುವ ರಾಜ್ಯ ಸರ್ಕಾರ, ಬೀದಿಗೆ ಬಿದ್ದಿರುವ ಸಂತ್ರಸ್ತ ಕುಟುಂಬಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ. ಈ ಜನರ ಸಂಕಷ್ಟ ಕೇಳುವವರೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಹಾರ ಕಾರ್ಯದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆ ಎರಡನ್ನೂ ಸರ್ಕಾರ ಕಾಯ್ದುಕೊಂಡಿಲ್ಲ. ಕೇಂದ್ರ ಬಿಡುಗಡೆ ಮಾಡಿದ ಹಣ ಹಾಗೂ ಸರ್ಕಾರ ಕರ್ಚು ಮಾಡಿದ ವೆಚ್ಚದ ವಿವರಗಳನ್ನು ಶ್ವೇತಪತ್ರ ಹೊರಡಿಸಲಿ ಎಂದು ಉಗ್ರಪ್ಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ