ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗ್ರಾ.ಪಂ. ಅವಿರೋಧ ಆಯ್ಕೆಗೆ 15 ಲಕ್ಷ ವಿಶೇಷ ಅನುದಾನ (Village Panchayath | Jagadish Shetter | Karnataka | Honnali)
Bookmark and Share Feedback Print
 
NRB
ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡರೆ ಅಂತಹ ಪಂಚಾಯತ್‌ಗೆ 15 ಲಕ್ಷ ರೂ. ವಿಶೇಷ ಅನುದಾನ ನೀಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಹೊನ್ನಾಳಿ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನಾ ಸಮಾರಂಭಕ್ಕೆ ಆಗಮಿಸಿದಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ನುಸುಳಬಾರದು ಎಂಬ ಉದ್ದೇಶದಿಂದ ಇಂತಹ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದರು.

ರಾಷ್ಟ್ತ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅತ್ಯುತ್ತಮ ಯೋಜನೆಯಾಗಿದ್ದು, ಹಲವು ನ್ಯೂನತೆಗಳ ನಡುವೆಯೂ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ