ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆಗೆ ಕೊಕ್? (Congress | KPCC | Desh pandy | Sonia gandhi | BBMP)
Bookmark and Share Feedback Print
 
ಬಿಬಿಎಂಪಿ ಚುನಾವಣೆ ಒಂದು ವೇಳೆ ಮುಂದೂಡಲ್ಪಟ್ಟರೆ, ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಅವರನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ನಡೆದ ವಿಧಾನಸಭೆ, ಉಪಚುನಾವಣೆಗಳಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿತ್ತು. ಇದೀಗ ಬಿಬಿಎಂಪಿ ಚುನಾವಣೆ ಕೂಡ ನಡೆಯಲಿದ್ದು, ಆಡಳಿತಾರೂಢ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಕೂಡ ತಮ್ಮ ಸ್ಥಾನ ಉಳಿಸಿಕೊಳ್ಳುವಲ್ಲಿ ತಂತ್ರ ಹೆಣೆಯುತ್ತಿವೆ.

ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಬಹುದಾದ ನಾಯಕರೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡುವ ಪ್ರಯತ್ನಗಳು ನಡೆದಿವೆ. ಹಾಗಾಗಿ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷರು ಯಾವ ಜಾತಿಗೆ ಸೇರಿದವರಾಗಿರುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

ಪ್ರಬಲ ಕೋಮಿಗೆ ಸೇರಿದವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ಹೋಗುವ ಬಗ್ಗೆ ಚರ್ಚೆಗಳು ಪಕ್ಷದ ವಲಯದಲ್ಲಿ ನಡೆದಿದೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ