ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಂಪಿ ಉತ್ಸವಕ್ಕೆ ಚಿದಂಬರಂ, ಅಡ್ವಾಣಿ; ಬಿಗಿ ಭದ್ರತೆ (Hampy Utsav | Karnataka | Sri Krishna Devaraya | BS Yedyurappa)
Bookmark and Share Feedback Print
 
ಇದೇ ತಿಂಗಳ 27ರಿಂದ ಹಂಪಿಯಲ್ಲಿ ಜರುಗುವ ಶ್ರೀಕೃಷ್ಣ ದೇವರಾಯರ ಪಟ್ಟಾಭಿಷೇಕದ 500ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸುಗಮ ಸಂಚಾರಕ್ಕೆ ವಿಶೇಷ ಒತ್ತು ನೀಡಲಾಗಿದ್ದು ಪೂರ್ವ ವಲಯದ ಜಿಲ್ಲೆಗಳ 2,500 ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ಜಿಲ್ಲಾ ಪೊಲೀಸರ ಜೊತೆಗೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಂದಲೂ ಸಿಬ್ಬಂದಿ ಬರಲಿದ್ದಾರೆ. ನಾಲ್ಕು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುವರು.

ಕೇಂದ್ರ ಗೃಹ ಸಚಿವ ಪಿ.ಚಿದಂಬರಂ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಲೋಕಸಭೆ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅತಿ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಭಾರೀ ಭದ್ರತೆ ಏರ್ಪಡಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ರಾಜ್ಯವು ಸಂಕಷ್ಟದಲ್ಲಿರುವ ಹೊತ್ತಿನಲ್ಲಿ ಈ ಉತ್ಸವದ ಅಗತ್ಯವೇನಿದೆ ಎಂದು ವಿರೋಧಪಕ್ಷಗಳು ಪ್ರಶ್ನಿಸಿರುವ ಹೊರತಾಗಿಯೂ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಐತಿಹಾಸಿಕ ಮೈಲುಗಲ್ಲಾಗಿಸುವ ಭರವಸೆಯಲ್ಲಿ ಮುಖ್ಯಮಂತ್ರಿಯವರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ