ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡುತ್ತೇನೆ: ಈಶ್ವರಪ್ಪ (KS Eshawappa | Karnataka | BJP | State President)
Bookmark and Share Feedback Print
 
NRB
ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತನ್ನ ಸಂಪುಟ ಸ್ಥಾನಕ್ಕೆ ಜನವರಿ 28ರಂದು ರಾಜೀನಾಮೆ ನೀಡಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಂದೇ ನಾಮಪತ್ರ ಸಲ್ಲಿಸಲಿದ್ದಾರೆ.

ಕಳೆದ ಹಲವು ಸಮಯಗಳಿಂದ ಕುತೂಹಲ ಮೂಡಿಸಿದ್ದ ಬಿಜೆಪಿ ಅಧ್ಯಕ್ಷ ಸ್ಥಾನ ಕೊನೆಗೂ ಈಶ್ವರಪ್ಪ ಅವರ ಮಡಿಲಿಗೆ ಬೀಳುವುದು ಖಚಿತವಾಗಿದ್ದು, ಅವರು ಗುರುವಾರ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುತ್ತೇನೆ ಎಂದರು.

ಅವರು ಬಿಜೆಪಿ ಅಧ್ಯಕ್ಷರಾಗುತ್ತಿರುವುದಕ್ಕೆ ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ತೀವ್ರವಾಗಿ ಟೀಕಿಸಿದ್ದರು. ಇಂಧನ ಸಚಿವ ಈಶ್ವರಪ್ಪ ಅವರು ರಾಜ್ಯಾಧ್ಯಕ್ಷರಾದರೆ ಬಿಜೆಪಿ ಸರ್ಕಾರ ಪತನವಾಗುವುದು ನಿಶ್ಚಿತ ಎಂದಿದ್ದ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೂ ಪ್ರತಿಕ್ರಿಯಿಸಿದ್ದ ಈಶ್ವರಪ್ಪ, ಬಾಯ್ಮುಚ್ಚಿ ಕುಳಿತುಕೊಳ್ಳುವಂತೆ ಕಾಂಗ್ರೆಸ್ ಮುಖಂಡರಿಗೆ ದಬಾಯಿಸಿದ್ದರು.

ಹಾಲಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈಶ್ವರಪ್ಪ ಅವರ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು.

ಡಿವಿ ನಿರ್ಗಮನದ ನಂತರ ಆ ಸ್ಥಾನಕ್ಕೆ ಅನುಭವಿ ಹಾಗೂ ಸಮರ್ಥ ನಾಯಕನೊಬ್ಬನ ಅಗತ್ಯವಿರುವುದರಿಂದ ಈಶ್ವರಪ್ಪ ಅವರನ್ನೇ ಆಯ್ಕೆ ನಡೆಸಲಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಶಾಸಕ ಸಿ.ಟಿ.ರವಿ, ಅರಗ ಜ್ಞಾನೇಂದ್ರ, ಸಚಿವ ಅರವಿಂದ ಲಿಂಬಾವಳಿ ಹಾಗೂ ವಿಜಯ್ ಶಂಕರ್ ಅವರು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಾಕಾಂಕ್ಷಿಗಳು ಎಂದು ಹೇಳಲಾಗುತ್ತಿದ್ದು, ಮತ್ತೆ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆಗಳನ್ನೂ ಅಲ್ಲಗಳೆಯಲಾಗದು.
ಸಂಬಂಧಿತ ಮಾಹಿತಿ ಹುಡುಕಿ