ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿ ಅಪಾರ್ಟ್‌ಮೆಂಟ್ ಕುಸಿತ: ಸಾವಿನ ಸಂಖ್ಯೆ 14 (Yeddyurappa | Karnataka | BJP | Apartment | Ballary)
Bookmark and Share Feedback Print
 
ಇಲ್ಲಿನ ಗಾಂಧಿನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕುಸಿದ ಪರಿಣಾಮ, ಇದುವರೆಗೆ 14ಮಂದಿ ಸಾವನ್ನಪ್ಪಿದ್ದು, 19ಜನರನ್ನು ರಕ್ಷಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ಕಾರ್ಯಾಚರಣೆ ಗುರುವಾರವೂ ಮುಂದುವರಿದಿದೆ.

ಮಂಗಳವಾರ ರಾತ್ರಿ ನಿರ್ಮಾಣ ಹಂತದಲ್ಲಿದ್ದ ಆರು ಮಹಡಿಯ ಖಾಸಗಿ ಅಪಾರ್ಟ್‌ಮೆಂಟ್‌ವೊಂದು ದಿಢೀರನೆ ಕುಸಿದು ಬಿದ್ದಿತ್ತು. ಈ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು.

ಕಟ್ಟಡದ ಸಮೀಪವೇ ಇದ್ದ ಹಾಸ್ಟೆಲ್ ಮೇಲೂ ಕಟ್ಟಡದ ಭಾಗ ಕುಸಿದು ಬಿದ್ದಿದ್ದರಿಂದ ವಿದ್ಯಾರ್ಥಿಗಳೂ ಸಾವನ್ನಪ್ಪಿದ್ದರು. ರಕ್ಷಣಾ ಕಾರ್ಯದಲ್ಲಿ ಬೆಂಗಳೂರು ಮತ್ತು ಪುಣೆಯಿಂದ ವಿಶೇಷ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಕಾರ್ಯಾಚರಣೆಗೆ ಅತ್ಯಾಧುನಿಕ ಪರಿಕರಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಹಾಗೂ ಗಾಯಾಳುಗಳನ್ನು ದಾಖಲು ಮಾಡಿದ್ದ ವಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ, ಮೃತ ವ್ಯಕ್ತಿಗಳ ಕುಟುಂಬಕ್ಕೆ 1ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 25ಸಾವಿರ ಪರಿಹಾರ ಘೋಷಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ