ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆ.ಎಸ್.ಈಶ್ವರಪ್ಪ ಬಿಜೆಪಿಗೆ ನೂತನ ಸಾರಥಿ (BJP | Yeddyurappa | Ishwarappa | Nithin | Siddaramaiah)
Bookmark and Share Feedback Print
 
NRB
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಮೂರನೇ ಬಾರಿಗೆ ಅಧ್ಯಕ್ಷಗಾದಿಯ ಜವಾಬ್ದಾರಿ ವಹಿಸಿಕೊಂಡ ಶ್ಲಾಘನೆಗೆ ಒಳಗಾಗಿದ್ದಾರೆ.

ಬಿಜೆಪಿ ರಾಜ್ಯ ಘಟಕದ ನೂತನ ಸಾರಥ್ಯ ವಹಿಸಿಕೊಂಡಿರುವ ಈಶ್ವರಪ್ಪ ಅವರು ಗುರುವಾರ ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ವರಿಷ್ಠರು ಅಭಿನಂದನೆ ಸಲ್ಲಿಸಿದ್ದಾರೆ.

ಜ.30ರಂದು ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ಸಮ್ಮುಖದಲ್ಲಿ ನಿರ್ಗಮಿತ ಅಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರು ಈಶ್ವರಪ್ಪನವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಜನವರಿ 20ರಂದು ನಡೆದ ರಾಜ್ಯ ಬಿಜೆಪಿ ಉನ್ನತ ಮಟ್ಟದ ಸಭೆಯಲ್ಲಿ ಈಶ್ವರಪ್ಪ ಅವರ ಆಯ್ಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಭಾನುವಾರ ರಾತ್ರಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈ ನಿರ್ಣಯಕ್ಕೆ ಅನುಮೋದನೆ ನೀಡಲಾಗಿತ್ತು.

ಈ ಎಲ್ಲಾ ಬೆಳವಣಿಗೆಗೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷಗಿರಿಗೆ ಶಾಸಕ ಸಿ.ಟಿ.ರವಿ, ಸಚಿವ ಅರವಿಂದ ಲಿಂಬಾವಳಿ, ಸಂಸದ ಪ್ರಹ್ಲಾದ್ ಜೋಶಿ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಅವರು ತೀವ್ರ ಪೈಪೋಟಿ ನಡೆಸಿದ್ದರು. ಆದರೆ ಕೊನೆಯ ಹಂತದ ಮಹತ್ವದ ಬೆಳವಣಿಗೆ ಎಂಬಂತೆ ಈಶ್ವರಪ್ಪ ಅವರ ಹೆಸರೇ ಅಂತಿಮಗೊಂಡಿತ್ತು.

ಆಡಳಿತ ಪಕ್ಷವನ್ನು ಪದೇ, ಪದೇ ಕಾಡುತ್ತಿರುವ ಭಿನ್ನಮತದ ಕೂಗು ಹಾಗೂ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಮೂಲಕ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎದುರಾಳಿಯನ್ನಾಗಿಸುವ ತಂತ್ರಗಾರಿಕೆಯ ಹಿನ್ನೆಲೆಯಲ್ಲಿ ಈಶ್ವರಪ್ಪನವರನ್ನು ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿದೆ ಎಂಬುದು ರಾಜ್ಯರಾಜಕಾರಣದ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ