ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಚುನಾವಣೆ ಮುಂದೂಡಿಕೆ ಬಿಜೆಪಿ ಕೈವಾಡ: ದೇಶಪಾಂಡೆ (BBMP | BJP | Yeddyurappa | KPCC | Desh pandy)
Bookmark and Share Feedback Print
 
ಬೆಂಗಳೂರು ಮಹಾನಗರವನ್ನು ಆಳುವ ಉದ್ದೇಶದಿಂದಾಗಿ ಬಿಬಿಎಂಪಿ ಚುನಾವಣೆ ಮುಂದೂಡಲು ಆಡಳಿತಾರೂಢ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಆರೋಪಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶವನ್ನು ನೆಪ ಮಾಡಿಕೊಂಡು ಚುನಾವಣೆಯನ್ನು ಮುಂದೆ ಹಾಕಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಅದರ ಧೋರಣೆ ಗಮನಿಸಿದರೆ ಜುಲೈವರೆಗೆ ಪಾಲಿಕೆಗೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿಲ್ಲ. ಇದೇ ಭಾವನೆಯನ್ನು ರಾಜ್ಯ ಚುನಾವಣೆ ಆಯೋಗವು ಹೊಂದಿರುವಂತೆ ಕಾಣುತ್ತದೆ ಎಂದು ದೂರಿದ್ದಾರೆ.

ಈಗಾಗಲೇ ನಿಗದಿಪಡಿಸಿರುವ ವಾರ್ಡ್‌ವಾರು ಮೀಸಲಾತಿ ಸಮರ್ಪಕವಾಗಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಆಗಿರುವ ಲೋಪವನ್ನು ಸರಿಪಡಿಸುವ ಬದಲು ಚುನಾವಣೆಯನ್ನೇ ಮುಂದೂಡುವುದು ಸರಿಯಲ್ಲ ಎಂದವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ನಂದಿನಿ ಹಾಲಿನ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಸ್ತಾಪವನ್ನು ಸರ್ಕಾರ ಕೂಡಲೇ ಕೈ ಬಿಡಬೇಕು. ಈಗಾಗಲೇ ಸರ್ಕಾರದ ಬಳಿ ಹಣವೂ ಇಲ್ಲ. ಪ್ರಸ್ತುತ ಹಣಕಾಸು ಪರಿಸ್ಥಿತಿಯೂ ಹದಗೆಟ್ಟಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ