ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೈಸ್ ಚರ್ಚೆ: ದೇವೇಗೌಡ-ಯಡಿಯೂರಪ್ಪ ಮುಖಾಮುಖಿ (Deve gowda | BJP | Yeddyurappa | Congress | JDS)
Bookmark and Share Feedback Print
 
ಪ್ರಾರಂಭದಿಂದಲೂ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿಗಳ ವಿರುದ್ಧ ನಡೆಸಿದ ಉಗ್ರ ವಾಕ್ಸಮರದ ಬಳಿಕ ಇದೇ ಮೊದಲ ಬಾರಿಗೆ ಶನಿವಾರ ಸಂಜೆ ಮುಖಾಮುಖಿಯಾಗಿ ಮಾತುಕತೆ ನಡೆಸಲಿದ್ದಾರೆ.

ಈ ಯೋಜನೆಗೆ ಹೆಚ್ಚುವರಿಯಾಗಿ ಭೂಮಿ ನೀಡಬಾರದೆಂದು ಒತ್ತಾಯಿಸಿ ಕೆಲವು ದಿನಗಳಿಂದ ಧರಣಿ ಹೋರಾಟ ನಡೆಸಿದ ದೇವೇಗೌಡರು ಇದೀಗ ಮುಖ್ಯಮಂತ್ರಿಗಳ ನಿವಾಸದ ಎದುರು ಧರಣಿ ನಡೆಸಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸರ್ಕಾರ ಮಾತುಕತೆಗೆ ಆಹ್ವಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಇಂದು ಮಾತುಕತೆ ನಡೆಯಲಿದ್ದು, ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಮಾತುಕತೆಯ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಸಚಿವ ಡಿ.ಬಿ. ಚಂದ್ರೇಗೌಡ, ಸಾರಿಗೆ ಸಚಿವ ಆರ್. ಅಶೋಕ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ. ಇನ್ನೊಂದೆಡೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ