ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಲಸಿಗರ ತಡೆಗೆ ಸೂಕ್ತ ಕ್ರಮ: ಬೊಮ್ಮಾಯಿ (Karnataka | BJP | Bommai | Yeddyurappa)
Bookmark and Share Feedback Print
 
ಮೂಲ ಸೌಕರ್ಯಗಳ ಕೊರತೆಯಿಂದ ಗ್ರಾಮೀಣ ಪ್ರದೇಶಗಳ ಜನರು ನಗರ ಪ್ರದೇಶಗಳತ್ತ ವಲಸೆ ಹೋಗುತ್ತಿದ್ದು ಇದನ್ನು ತಡೆಯಲು ಜನಪರ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದು ಜಲಸಂಪನ್ಮೂಲ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಸ್ತುತ ಸರ್ಕಾರದ ಯೋಜನೆಗಳು ಪ್ರತಿಷ್ಠಿತ ಯೋಜನೆಗಳಾಗಿದ್ದು, ಇವುಗಳನ್ನು ಪ್ರಾಮಾಣಿಕವಾಗಿ ಅರ್ಹರಿಗೆ ಒದಗಿಸುವಲ್ಲಿ ಅಧಿಕಾರಿಗಳು ಶ್ರಮಿಸಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.

ಸಮಗ್ರ ಗ್ರಾಮೀಣಾಭಿವೃದ್ಧಿಗೆ ಸುವರ್ಣ ಗ್ರಾಮ ಯೋಜನೆಯಡಿ 107 ಕೋಟಿ ರೂ.ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ, ಸಮುದಾಯ ಭವನ, ಅಂಗನವಾಡಿ ಕಟ್ಟಡ, ತ್ಯಾಜ್ಯ ವಸತು ವಿಲೇವಾರಿ, ಭೂಮಿ ಖರೀದಿ, ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ