ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನ್ನಡಿಗರನ್ನ ಕೆರಳಿಸಿದ್ರೆ ಸರ್ಕಾರ ಉಳಿಯೋಲ್ಲ: ನಾರಾಯಣ ಗೌಡ (BJP | Congress | JDS | Narayana gowda | Marati)
Bookmark and Share Feedback Print
 
NRB
ಆಡಳಿತಾರೂಢ ಬಿಜೆಪಿ ಸರ್ಕಾರ ಕನ್ನಡ ವಿರೋಧಿಯಾಗಿದೆ ಎಂದು ಕಿಡಿಕಾರಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಕನ್ನಡಿಗರನ್ನು ಕೆರಳಿಸಿದರೆ ಸರ್ಕಾರ ಉಳಿಯೋಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಶುಕ್ರವಾರ ಮರಾಠಿಗರ ಸೀಮಾ ಪರಿಷತ್ ಸಮಾವೇಶ ನಡೆಯುತ್ತಿದ್ದು, ಅದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಬಾರದೆಂದು ಆಗ್ರಹಿಸಿ ಕರವೇ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ ನಾರಾಯಣ ಗೌಡ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡರು.

ನಂತರ ನಾರಾಯಣ ಗೌಡರನ್ನು ಬೆಳಗಾವಿ ಪೊಲೀಸರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೌಡರು, ನಾವೇನು ನಾಡದ್ರೋಹಿಗಳೇ. ಕನ್ನಡಕ್ಕಾಗಿ ಹೋರಾಡುತ್ತಿರುವ ನಮ್ಮನ್ನು ಯಾಕೆ ಬಂಧಿಸುತ್ತೀರಿ. ಮೊದಲು ಮರಾಠಿಗರ ಸೀಮಾ ಪರಿಷತ್ ಸಮಾವೇಶ ನಿಲ್ಲಿಸಿ ಎಂದು ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಕನ್ನಡಿಗರನ್ನು ಎದುರು ಹಾಕಿಕೊಂಡ ಗುಂಡುರಾವ್ ಸರ್ಕಾರ ಕೂಡ ಪತನವಾಗಿತ್ತು ಎಂದು ಉದಾಹರಣೆ ನೀಡಿದ ಅವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಕನ್ನಡ ವಿರೋಧಿ ನಿಲುವ ತಳೆಯುತ್ತಿದೆ ಎಂದು ದೂರಿದರು. ಆ ನಿಟ್ಟಿನಲ್ಲಿ ಮುಂದಿನ ಒಂದು ವರ್ಷಗಳ ಕಾಲ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ವಿರೋಧ ವ್ಯಕ್ತಪಡಿಸುವುದಾಗಿ ಹೇಳಿದರು.

ಎಂಇಎಸ್-ಕರವೇ ಕಾರ್ಯಕರ್ತರ ಮಾರಾಮಾರಿ: ಮರಾಠಿ ಸೀಮಾ ಪರಿಷತ್ ಇಲ್ಲಿನ ಲೇಲೆ ಮೈದಾನದಲ್ಲಿ ನಡೆಸುತ್ತಿರುವ ಸಮಾವೇಶವನ್ನು ತಡೆಯುವ ನಿಟ್ಟಿನಲ್ಲಿ ನೂರಾರು ಕರವೇ ಕಾರ್ಯಕರ್ತರು ತಡೆಯುವ ನಿಟ್ಟಿನಲ್ಲಿ ಮುನ್ನುಗ್ಗಿದ ಸಂದರ್ಭದಲ್ಲಿ ಎಂಇಎಸ್ ಮತ್ತು ಕರವೇ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದ್ದಾರೆ. ಸುಮಾರು 400ಕ್ಕೂ ಅಧಿಕ ಮಂದಿ ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಯಾವುದೇ ಕಾರಣಕ್ಕೂ ಮರಾಠಿ ಸೀಮಾ ಪರಿಷತ್ ಸಮಾವೇಶಕ್ಕೆ ಅವಕಾಶ ಕೊಡಲ್ಲ ಎಂದು ಪಣತೊಟ್ಟಿರುವ ಕರವೇ ನಿಲುವಿನಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹಲವಾರು ಕಾರ್ಯಕರ್ತರು ಲಾಠಿ ಪ್ರಹಾರದಿಂದ ಗಾಯಗೊಂಡಿದ್ದಾರೆ. ಇದೀಗ ಮತ್ತಷ್ಟು ಕಾರ್ಯಕರ್ತರು ತಮ್ಮೊಂದಿಗೆ ಕೈಜೋಡಿಸಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ