ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುಟುಂಬಕ್ಕೆ ಒಂದೇ ಮಗುವಿನಿಂದ ಲಿಂಗಾನುಪಾತ ವ್ಯತ್ಯಾಸ: ಆಚಾರ್ಯ (male female ratio | Karnataka | VS Acharya | census 2011)
Bookmark and Share Feedback Print
 
ಒಂದು ಕುಟುಂಬಕ್ಕೆ ಒಂದೇ ಮಗು ಎಂಬ ಚಿಂತನೆ ಲಿಂಗಾನುಪಾತ ಅಂತರ ಹೆಚ್ಚಾಗಲು ಕಾರಣವಾಗಿದೆ ಎಂದು ರಾಜ್ಯದ ಪ್ರಧಾನ ಜನಗಣತಿ ಅಧಿಕಾರಿಗಳ ರಾಜ್ಯಮಟ್ಟದ ಪ್ರಥಮ ಸಮ್ಮೇಳನದಲ್ಲಿ ಗೃಹಸಚಿವ ವಿ.ಎಸ್. ಆಚಾರ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಈ ಸಮಾವೇಶದಲ್ಲಿ ಮಾತನಾಡುತ್ತಿದ್ದ ಸಚಿವರು, ಜಿಲ್ಲಾ ಮಟ್ಟದಲ್ಲಿ ಲಿಂಗಾನುಪಾತ ಪತ್ತೆ ಹಚ್ಚಲು ಮತ್ತು ಇತರ ಮಾಹಿತಿಗಳಿಗಾಗಿ ಜನಗಣತಿ ಹೆಚ್ಚು ಉಪಯುಕ್ತವಾಗಲಿದೆ. ಜನಜೀವನದ ಸಮಗ್ರ ಚಿತ್ರಣವೇ ಇದರಿಂದ ದೊರಕುತ್ತದೆ ಎಂದು 2011ರ ಜನಗಣತಿ ಕುರಿತು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಅವರು, ಒಂದೇ ಮಗು ಎಂಬ ಚಿಂತನೆ ಹೆಣ್ಣು ಮತ್ತು ಗಂಡು ಅನುಪಾತದಲ್ಲಿ ವ್ಯತ್ಯಾಸವಾಗಲು ಕಾರಣವಾಗಿದೆ ಎಂದರು. ಆದರೆ ಇದಕ್ಕೆ ಯಾವ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕೆಂಬ ಸಲಹೆ ಅವರಿಂದ ಬರಲಿಲ್ಲ.

2010ರ ಏಪ್ರಿಲ್ 15ರಿಂದ ಜೂನ್ 1ರವರೆಗೆ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳು ಜನ ಹಾಗೂ ಮನೆ ಗಣತಿ ನಡೆಸಲಿದ್ದಾರೆ. ಈ ಎಣಿಕೆ ಕಾರ್ಯ 2011ರ ಫೆಬ್ರವರಿ 9ರಿಂದ 28ರವರೆಗೆ ನಡೆಯಲಿದೆ. ಗಣಿ ಸಮಗ್ರ ಪರಿಶೀಲನೆ 2011ರ ಮಾರ್ಚ್ 1ರಿಂದ 5ರವರೆಗೆ ನಡೆಯಲಿದೆ ಎಂದು ಈ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಮಹಾ ನೋಂದಣಾಧಿಕಾರಿ ಮತ್ತು ಜನಗಣತಿ ಆಯುಕ್ತ ಡಾ. ಸಿ. ಚಂದ್ರಮೌಳಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಂದಾಯ ಸಚಿವ ಜಿ. ಕರುಣಾಕರ ರೆಡ್ಡಿಯವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡುತ್ತಾ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

ಜನಗಣತಿ ಮಾಡುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಪ್ಪುಗಳಿಗೆ ಅವಕಾಶ ನೀಡಬಾರದು. ಸ್ಪಷ್ಟ ಮಾಹಿತಿ ಮತ್ತು ನೈಜತೆಗೆ ಹೆಚ್ಚಿನ ಒತ್ತು ಕೊಡಿ. ಅನುಮಾನ ಮತ್ತು ಗೊಂದಲಗಳಿಗೆ ಅವಕಾಶ ನೀಡಕೂಡದು ಎಂದರು.

ಜನರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮಾಹಿತಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿವರಗಳನ್ನೂ ಇದೇ ಸಂದರ್ಭದಲ್ಲಿ ಸಂಗ್ರಹಿಸಲಾಗುತ್ತದೆ. ರಾಷ್ಟ್ರೀಯ ಗುರುತಿನ ಚೀಟಿ ಯೋಜನೆ ಮತ್ತು ಸರಕಾರದ ಇತರ ಯೋಜನೆಗಳ ಅನುಷ್ಠಾನಕ್ಕೆ ಇದು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ