ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ಎದುರಿಸಲು ಸಿದ್ಧ: ಈಶ್ವರಪ್ಪ (KS Eshwarappa | HR Bharadhwaj | Karnataka | Congress)
Bookmark and Share Feedback Print
 
NRB
ರಾಜ್ಯಪಾಲರ ಹುದ್ದೆಯ ಬಗ್ಗೆ ತಮಗೆ ಗೌರವವಿದೆ. ಆದರೆ ರಾಜ್ಯಪಾಲರಾದ ಎಚ್.ಆರ್. ಭಾರದ್ವಾಜ್ ಅವರು ಕಾಂಗ್ರೆಸ್ ಪಕ್ಷದ ವಕ್ತಾರರಂತೆ ನಡೆದುಕೊಳ್ಳುವುದನ್ನು ಪ್ರೋತ್ಸಾಹಿಸುವುದು ಸರಿಯಲ್ಲ. ನನ್ನ ಹೇಳಿಕೆಯ ಕುರಿತು ಕಾಂಗ್ರೆಸ್ ಮಾನನಷ್ಟ ಮೊಕದ್ದಮೆ ಹೂಡಿದರೂ ನಾನು ಎದುರಿಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕಾಂಗ್ರೆಸ್ ವಕ್ತಾರರಂತೆ ನಡೆದುಕೊಳ್ಳುವ ಮೂಲಕ ಅಭಿವೃದ್ದಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಇದನ್ನು ನಾನು ಖಡಾ ಖಂಡಿತವಾಗಿ ವಿರೋಧಿಸುತ್ತೇನೆ ಎಂದಿದ್ದಾರೆ.

ಅಲ್ಲದೆ, ಈ ಬಗ್ಗೆ ಕಾಂಗ್ರೆಸ್ ಮುಖಂಡರು ಮಾನನಷ್ಟ ಮೊಕದ್ದಮೆ ದಾಖಲು ಮಾಡಿದರೂ ಅದನ್ನು ಎದುರಿಸಲು ನಾನು ಸಿದ್ದನಿದ್ದೇನೆ ಎಂದು ಅವರು ಸವಾಲು ಹಾಕಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅಧ್ಯಕ್ಷರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಅಧಿಕಾರ ಕೈ ತಪ್ಪಿರುವ ಕಾರಣದಿಂದಾಗಿ ವಿನಾಕಾರಣ ಸರ್ಕಾರದ ಮೇಲೆ ಆರೋಪ ಮಾಡುತ್ತಿವೆ ಎಂದು ದೂರಿದರು.

ಸೋಮಣ್ಣ ಅವರ ಹೆಸರನ್ನು ವಿಧಾನ ಪರಿಷತ್ ನಾಮಕರಣಕ್ಕೆ ತಿರಸ್ಕರಿಸುವ ಮೂಲಕ ರಾಜ್ಯಪಾಲರು ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ. ರಾಜ್ಯಪಾಲರು ತಮ್ಮ ಹುದ್ದೆಗೆ ತಕ್ಕಂತೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ. ಅವರು ರಾಜೀನಾಮೆ ನೀಡಿ, ರಾಜಕೀಯಕ್ಕೆ ಇಳಿಯಲಿ ಎಂದು ಈಶ್ವರಪ್ಪ ಕೆಲ ದಿನಗಳ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿಪಕ್ಷ ಮಾಜಿ ನಾಯಕ ವಿ.ಎಸ್. ಉಗ್ರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂತಾದವರು ಈಶ್ವರಪ್ಪ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ