ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕರವೇ ವಿರುದ್ಧ ಎಂಇಎಸ್ ದೌರ್ಜನ್ಯ: ಬೆಳಗಾವಿ ಬಂದ್‌ (MES | Kannada Rakshana vedike | BJP | Belagavi)
Bookmark and Share Feedback Print
 
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಗಳವಾರ ಬೆಳಗಾವಿ ಬಂದ್‌ಗೆ ಕರೆ ನೀಡಿದ್ದು ಉತ್ತಮ ಬೆಂಬಲ ವ್ಯಕ್ತವಾಗಿದೆ.

ಇತ್ತೀಚೆಗಷ್ಟೇ ನಗರದ ಲೇಲೆ ಮೈದಾನದಲ್ಲಿ ಎಂಇಎಸ್ ಮರಾಠಿ ಸೀಮಾ ಪರಿಷತ್ ಸಮಾವೇಶ ನಡೆಸಿದ ಸಂದರ್ಭದಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೇ, ಸರ್ಕಾರ ಕೂಡ ಮರಾಠಿಗರಿಗೆ ಬೆಂಬಲ ನೀಡಿ, ಕನ್ನಡ ಪರ ಹೋರಾಡುತ್ತಿದ್ದ ವೇದಿಕೆಯ ಕಾರ್ಯಕರ್ತರನ್ನೇ ಥಳಿಸಿ ಬಂಧಿಸಿರುವ ಧೋರಣೆ ವಿರೋಧಿಸಿ ಬಂದ್‌ಗೆ ಕರೆ ನೀಡಿತ್ತು.

ಕರವೇ ಬಂದ್‌ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂಗಡಿ-ಮುಂಗಟ್ಟುಗಳು ಬಂದ್ ಆಗಿದೆ. ಬಸ್ ಸಂಚಾರ ಕೂಡ ಇಲ್ಲದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಕೆಲವಡೆ ಗುಂಪು ಘರ್ಷಣೆ ನಡೆದಿರುವ ಹಿನ್ನಲೆಯಲ್ಲಿ ಪೊಲೀಸರು ಲಘ ಲಾಠಿ ಪ್ರಹಾರ ನಡೆಸಿದ್ದಾರೆ.

ಅಲ್ಲದೇ ಕರವೇ ಬಂದ್ ಕರೆ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿಯೂ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಸಂಸದ ಸುರೇಶ್ ಅಂಗಡಿ ಅವರ ಕಾರನ್ನು ತಡೆದು ಕಪ್ಪು ಪಟ್ಟಿ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಪೊಲೀಸರು ವೇದಿಕೆಯ ಕಾರ್ಯಕರ್ತರ ಮೇಲೆ ಲಘ ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂದೆ ನಾಲ್ಕು ಮಂದಿ ಕರವೇ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ