ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಹದಾಯಿ ವಿವಾದ:ಹಸಿ,ಹಸಿ ಸುಳ್ಳು ಹೇಳುವ ಸಿಎಂ ಯಡಿಯೂರಪ್ಪ! (Yeddyurappa | BJP | Congress | Goa | Digambara kamath)
Bookmark and Share Feedback Print
 
ಮಹಾದಾಯಿ ನೀರು ಹಂಚಿಕೆ ವಿವಾದ ಕುರಿತಂತೆ ಗೋವಾ ಮುಖ್ಯಮಂತ್ರಿ ದಿಗಂಬರ ಕಾಮತ್ ಅವರೊಂದಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ರಾಗವನ್ನು ಬದಲಿಸಿದ್ದು, ತಾನು ಆ ರೀತಿ ಹೇಳಿಲ್ಲ. ಅಲ್ಲದೇ ಗೋವಾ ಮುಖ್ಯಮಂತ್ರಿ ಯಾವುದೇ ಒಪ್ಪಿಗೆ ಸೂಚಿಸಿಲ್ಲ ಎಂದು ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಗೋವಾ ಮುಖ್ಯಮಂತ್ರಿ ಕಾಮತ್ ಜೊತೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ತಾನು ಔಪಚಾರಿಕವಾಗಿ ಮಾತುಕತೆ ನಡೆಸಿದ್ದೇವೆ. ಅನಾವಶ್ಯಕವಾಗಿ ವಿವಾದ ಕುರಿತಂತೆ ಕೋರ್ಟ್ ಮೆಟ್ಟಿಲೇರುವುದು ಬೇಡ. ಕರ್ನಾಟಕಕ್ಕೆ ಏನು ಬೇಕು ಅದನ್ನು ನೀವು ಕೊಡಿ, ನಿಮಗೆ ಏನು ಬೇಕು ಅದನ್ನು ನಾವು ಕೊಡುತ್ತೇವೆ ಎಂದು ದೆಹಲಿಯಲ್ಲಿ ಇತ್ತೀಚೆಗೆ ಪ್ರಧಾನಿ ನೇತೃತ್ವದಲ್ಲಿ ನಡೆದ ಮುಖ್ಯಮಂತ್ರಿಗಳ ಸಭೆ ನಂತರ ಭೇಟಿಯಾಗಿ ಮಾತುಕತೆ ನಡೆಸಿರುವುದಾಗಿ ಯಡಿಯೂರಪ್ಪ ಇತ್ತೀಚೆಗೆ ಬೆಂಗಳೂರಿನಲ್ಲಿ (ಫೆ.7)ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದರು.

ಆದರೆ ಇದೀಗ ಯಡಿಯೂರಪ್ಪ ಅವರು ಏಕಾಏಕಿ, ಮಹದಾಯಿ ಕುರಿತಂತೆ ಗೋವಾ ಮುಖ್ಯಮಂತ್ರಿ ಯಾವುದೇ ಒಪ್ಪಿಗೆ ಸೂಚಿಸಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ ಎಂದು ಗೂಬೆ ಕೂರಿಸಿದರು. ತಾನು ಕೂಡ ಆ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದರು.

ಗೋವಾ ಮುಖ್ಯಮಂತ್ರಿ ದಿಗಂಬರ ಕಾಮತ್ ಜೊತೆ ನರೇಂದ್ರ ಮೋದಿ ಜೊತೆ ತೆರಳಿ ಮಾತುಕತೆ ನಡೆಸಿದ್ದೇನೆ ಎಂಬುದರಲ್ಲಿ ಹುರುಳಿಲ್ಲ. ಈ ಬಗ್ಗೆ ಶೀಘ್ರವೇ ಗೋವಾ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವುದಾಗಿ ಸ್ಪಷ್ಟನೆ ನೀಡುವ ಮೂಲಕ ಮುಖ್ಯಮಂತ್ರಿಗಳು ಮತ್ತೊಮ್ಮೆ ತಮ್ಮ ಸುಳ್ಳು ಮಾತಿನ ವರಸೆಯನ್ನು ಮುಂದುವರಿಸಿದ್ದಾರೆ.

ಈಗಾಗಲೇ ಬಿ.ಎಸ್.ಯಡಿಯೂರಪ್ಪ ಸುಳ್ಳು ಭರವಸೆ ನೀಡುವುದರಲ್ಲಿ ನಂ.1ಮುಖ್ಯಮಂತ್ರಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಾವೇ ಬಹಿರಂಗವಾಗಿ ನೀಡಿದ್ದ ಹೇಳಿಕೆಯನ್ನು ಅಲ್ಲಗಳೆದು ಪುಷ್ಠಿ ನೀಡಿದ್ದಾರೆ ಎಂಬುದಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಗಳು ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ಇದರಿಂದಲೇ ಸಾಬೀತಾಗುತ್ತಿದೆ ಎಂದು ದೂರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ