ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧದಿಂದ ಅನಾಹುತ: ಗೌಡ ಎಚ್ಚರಿಕೆ (BJP | Yeddyurappa | Karnataka | Cow Slaughter | Deve gowda)
Bookmark and Share Feedback Print
 
ರಾಜ್ಯದಲ್ಲಿ ಗೋ ಹತ್ಯೆ ನಿಷೇಧದಿಂದ ಅನಾಹುತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಗೋ ಹತ್ಯೆ ನಿಷೇಧ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಬಾರದೆಂದು ಆಗ್ರಹಿಸಿದ್ದಾರೆ.

ಗುರುವಾರ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧದ ದುಸ್ಸಾಹಸಕ್ಕೆ ಮುಂದಾಗಬಾರದು ಎಂದು ಎಚ್ಚರಿಸಿದರು. ಇದು ಅಪಾಯಕಾರಿಯಾದ ನಿರ್ಧಾರ ಎಂಬುದಾಗಿಯೂ ಈ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಗೋವನ್ನು ರಾಜ್ಯದಲ್ಲಿ ಕೇವಲ ಮುಸ್ಲಿಮರು ಮಾತ್ರ ತಿನ್ನುವುದಿಲ್ಲ, ದಲಿತರು, ಕ್ರೈಸ್ತರು ಸೇರಿದಂತೆ ಎಲ್ಲಾ ಹಿಂದುಳಿದ ವರ್ಗದವರು ತಿನ್ನುತ್ತಾರೆ. ಅಲ್ಲದೇ ಗೋ ಹತ್ಯೆ ನಿಷೇಧದಿಂದ ಚರ್ಮದ ಉದ್ಯಮಕ್ಕೂ ಹೊಡೆತ ಬೀಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಒಂದು ವೇಳೆ ಬಿಜೆಪಿ ಸರ್ಕಾರ ತನ್ನ ಸಂಖ್ಯಾ ಬಲದಿಂದ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿರ್ಧಾರ ಕೈಗೊಂಡರೂ ಕೂಡ, ಅಂತಿಮವಾಗಿ ರಾಜ್ಯಪಾಲರು ಅದಕ್ಕೆ ಅಂಕಿತ ಹಾಕಬಾರದು ಎಂದು ವಿನಂತಿಸಿಕೊಂಡರು. ಗೋ ಹತ್ಯೆ ನಿಷೇಧದ ಕುರಿತಂತೆ ಪಕ್ಷಕ್ಕೆ ಲಾಭವಾಗಲಿ ಇಲ್ಲವೇ ನಷ್ಟವಾಗಲಿ ಅದನ್ನು ತೀವ್ರವಾಗಿ ವಿರೋಧಿಸುವುದಾಗಿ ಗೌಡರು

ಬುಧವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಅನುಮತಿ ನೀಡಲಾಗಿತ್ತು. ಗೋ ಸಂರಕ್ಷಣಾ ಕಾಯ್ದೆಯಡಿ ನಿಷೇಧ ಜಾರಿ ಮಾಡುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ, ಗೋ ಹತ್ಯೆ ಮಾಡಿದವರಿಗೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಚಿವ ಸಂಪುಟ ಸಭೆ ನಂತರ ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ