ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪರೀಕ್ಷೆ ಮುಗಿಯುವವರೆಗೆ ಪವರ್ ಕಟ್ ಇಲ್ಲ: ಯಡಿಯೂರಪ್ಪ (Yeddyurappa | BJP | MES | Congress)
Bookmark and Share Feedback Print
 
ನಿರಂತರ ವಿದ್ಯುತ್ ನೀಡಲು ಸಾಧ್ಯವಿಲ್ಲ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ, ಪರೀಕ್ಷೆ ಮುಗಿಯುವವರೆಗೆ ಪವರ್ ಕಟ್ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮುನ್ನಚ್ಚರಿಕಾ ಕ್ರಮಗಳನ್ನು ವಹಿಸಲಾಗಿದ್ದು, ಯಾವುದೇ ಸಂದರ್ಭದಲ್ಲಿಯೂ ಪವರ್ ಕಟ್ ಆಗದಂತೆ ಎಚ್ಚರ ವಹಿಸಲಾಗುವುದು ಎಂದು ಅವರು ಖಾಸಗಿ ಚಾನಲ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮುಂದಿನ ವರ್ಷಗಳಲ್ಲಿ ರಾಜ್ಯದಲ್ಲಿ 5 ಸಾವಿರ ಮೆ. ವ್ಯಾ. ವಿದ್ಯುತ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದ್ದು, ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.

ಅಲ್ಲದೆ, ಹೊರರಾಜ್ಯಗಳಿಂದ 280 ಮೆ. ವ್ಯಾ. ವಿದ್ಯುತ್ ಅನ್ನು ಖರೀದಿ ಮಾಡಲಾಗುತ್ತಿದ್ದು, ಮತ್ತೆ 200 ಮೆ. ವ್ಯಾ. ವಿದ್ಯುತ್ ಖರೀದಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯಪಾಲರ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ರಾಜ್ಯಪಾಲರು ಮತ್ತು ಸರ್ಕಾರದ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. 3 ವರ್ಷಗಳ ನಂತರವೂ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭರವಸೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಎಂಇಎಸ್‌ಗೆ ಸೀಮಾ ಪರಿಷತ್ ನಡೆಸಲು ಅವಕಾಶ ನೀಡಿರುವ ಬಗ್ಗೆ ಮಾತನಾಡಿದ ಅವರು, ದೇಶದ ಯಾವುದೇ ಭಾಗದಲ್ಲಿ ಭಾರತೀಯರಿಗೆ ಸಮಾವೇಶ ನಡೆಸಲು ಅವಕಾಶವಿದೆ. ಆದರೆ ಎಂಇಎಸ್ ಕಾರ್ಯಕರ್ತರು ಕನ್ನಡಿಗರೊಂದಿಗೆ ನಡೆದುಕೊಂಡಿರುವ ರೀತಿ ಬೇಸರ ತರಿಸಿದೆ. ಈ ಬಗ್ಗೆ ಪ್ರಧಾನಿಯವರಿಗೆ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ