ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಂಪುಟ ಪುನರ್‌ ರಚನೆಯಲ್ಲಿ ಮಹಿಳೆಗೆ ಸ್ಥಾನ: ಈಶ್ವರಪ್ಪ (Ishwarappa | BJP | Shimoga | Budget | Yeddyurappa)
Bookmark and Share Feedback Print
 
ಬಜೆಟ್ ಅಧಿವೇಶನದ ಬಳಿಕ ರಾಜ್ಯದ ಸಂಪುಟವನ್ನು ಪುನರ್ ರಚಿಸಲಿದ್ದು, ಮಹಿಳೆಯೊಬ್ಬರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಸಣ್ಣ ಪುಟ್ಟ ಬದಲಾವಣೆಗಳಾಗಲಿದ್ದು, ಮಹಿಳೆಯರಿಗೆ ಹೆಚ್ಚಿನ ಸ್ಥಾನ ನೀಡಲಾಗುವುದು ಎಂದು ಹೇಳಿದ್ದು, ಆದರೆ ಯಾರೆಂಬ ಸುಳಿವನ್ನು ಮಾತ್ರ ಬಿಟ್ಟುಕೊಟ್ಟಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ಮಲತಾಯಿ ಧೋರಣೆಯ ವಿರುದ್ಧ ಸಮರ ಸಾರುವುದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ