ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಾಲಿನ ಬೆಲೆ ಏರಿಕೆ ವಿಚಾರ ಗೊತ್ತಿಲ್ಲ: ಯಡಿಯೂರಪ್ಪ (Yeddyurappa | BJP | Ishwarappa | KMF | Somashekar Reddy)
Bookmark and Share Feedback Print
 
ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಭಿನ್ನ ಹೇಳಿಕೆ ನೀಡುವ ಮೂಲಕ ಗೊಂದಲ ಹುಟ್ಟುಹಾಕಿದ್ದಾರೆ.

ಹಾಲಿನ ಬೆಲೆ ಹೆಚ್ಚಳಕ್ಕೆ ಮಾಡುವ ಬಗ್ಗೆ ಇನ್ನು ಕೂಡ ಯಾವುದೇ ಪ್ರಸ್ತಾಪ ಬಂದಿಲ್ಲ. ಈ ಬಗ್ಗೆ ಇನ್ನು ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ನನ್ನೊಂದಿಗೆ ಇದುವರೆಗೆ ಯಾರೊಬ್ಬರು ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಈ ಮೊದಲು ಬರುವ ಮಾರ್ಚ್ 1ರಿಂದ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3ರಿಂದ 4ರೂ. ಹೆಚ್ಚಳವಾಗಲಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದು ಸೋಮಶೇಖರ ರೆಡ್ಡಿ ತಿಳಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ