ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪೈಲಟ್ ವಸತಿ ಯೋಜನೆಗೆ ಅಟಲ್ ಹೆಸರು: ಕಟ್ಟಾ (Atal Bihari Vajpayee | Katta | BJP | Haveri)
Bookmark and Share Feedback Print
 
ರಾಜ್ಯ ಸರಕಾರ ನೂತನವಾಗಿ ಆರಂಭಿಸಿರುವ ವಸತಿ ಯೋಜನೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಡುವ ಬಗ್ಗೆ ಚಿಂತನೆ ನಡೆದಿದೆ ಎಂದು ರಾಜ್ಯ ವಸತಿ ಖಾತೆ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದ್ದಾರೆ.

ಶಿಗ್ಗಾವಿ ತಾಲೂಕಿನಲ್ಲಿ ಪೈಲಟ್ ಯೋಜನೆಯಡಿ 100ಮನೆ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ರಾಜ್ಯದ 8 ವಿಧಾನ ಸಭಾ ಕ್ಷೇತ್ರದಲ್ಲಿ ಪೈಲಟ್ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೀಘ್ರದಲ್ಲಿಯೇ ಈ ಯೋಜನೆಗೆ ವಾಜಪೇಯಿ ಅವರ ಹೆಸರು ನಾಮಕರಣ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಗುಡಿಸಲುರಹಿತ ಗ್ರಾಮ ನಿರ್ಮಾಣದ ಉದ್ದೇಶ ಹೊಂದಿರುವ ಈ ಯೋಜನೆ ಯಡಿಯೂರಪ್ಪನವರ ಕನಸಾಗಿದ್ದು, ಮೊದಲ ಹಂತದಲ್ಲಿ 40 ಗ್ರಾಮ ಹಾಗೂ 40 ಪಟ್ಟಣಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ