ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂದ್ ಹಿಂದೆ ಬಿಜೆಪಿ ವಿರೋಧಿಗಳ ಪಿತೂರಿ: ಯಡಿಯೂರಪ್ಪ (Yeddyurappa | BJP | Sri rama sene | Police | Muthalik)
Bookmark and Share Feedback Print
 
ರಾಜ್ಯದ ಅಭಿವೃದ್ಧಿಯನ್ನು ಸಹಿಸದ ಬಿಜೆಪಿ ವಿರೋಧಿಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಸರ್ಕಾರಕ್ಕೆ ಕೆಟ್ಟ ಹೆಸರು ತರಲು ವ್ಯವಸ್ಥಿತ ಪಿತೂರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ ತಂದು ಘರ್ಷಣೆಗೆ ಕುಮ್ಮಕ್ಕು ನೀಡುವವರು, ಶಾಂತಿ ಸುವ್ಯವಸ್ಥೆ ಕದಡುವವರು ಯಾರೇ ಇರಲಿ ಅಂತಹವರನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವುದಾಗಿ ಹೇಳಿದರು.

ಯಾವುದೇ ಕಾರಣಕ್ಕೂ ಶ್ರೀರಾಮಸೇನೆ ನೀಡಿರುವ ಬಂದ್ ಕರೆ ಯಶಸ್ವಿಯಾಗಲು ಬಿಡುವುದಿಲ್ಲ ಎಂದರು. ಸರ್ಕಾರದ ಅಭಿವೃದ್ಧಿಯನ್ನು ಸಹಿಸದ ವಿಪಕ್ಷಗಳು ಈ ಹಿಂದೆ ವೀರೇಂದ್ರ ಪಾಟೀಲ್ ಸರ್ಕಾರವನ್ನು ಉರುಳಿಸಿದಂತೆ, ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಹೇಗಾದರೂ ಮಾಡಿ ಉರುಳಿಸುವ ಯತ್ನ ನಡೆಸುತ್ತಿದ್ದಾರೆಂದು ಗಂಭೀರವಾಗಿ ದೂರಿದರು.

ಪ್ರೇಮಿಗಳ ದಿನಾಚರಣೆಗೆ ಅಡ್ಡಿಪಡಿಸುವುದಾಗಿ ಹೇಳಿಕೆ ನೀಡಿದ್ದ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರನ್ನು ಬೆಂಗಳೂರಿನಲ್ಲಿ ಖಾಸಗಿ ಟಿವಿ ಚಾನೆಲ್‌ವೊಂದು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಖಕ್ಕೆ ಮಸಿ ಬಳಿದಿದ್ದರು. ಘಟನೆಯನ್ನು ಖಂಡಿಸಿ ಶ್ರೀರಾಮಸೇನೆ ಶನಿವಾರ ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ