ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರೇಮಿಗಳಿಗೆ ಅಡ್ಡಿಪಡಿಸಲು ಮುತಾಲಿಕ್ ಯಾರು?: ಸಿದ್ದು (Siddaramaiah | Congress | Muthalik | Sri rama sene | BJP)
Bookmark and Share Feedback Print
 
NRB
ಪ್ರೇಮಿಗಳ ದಿನಾಚರಣೆ ತಡೆಯಲು ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಯಾರು? ಆತನಿಗೆ ಯಾವ ಅಧಿಕಾರವಿದೆ? ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ಧರಾಮಯ್ಯ ಗಂಭೀರವಾಗಿ ಪ್ರಶ್ನಿಸಿದ್ದಾರೆ.

ಅಮೃತ ಮಹೋತ್ಸವ ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಮೂಕ ಪ್ರೇಕ್ಷಕನಂತೆ ಕೂತಿದೆ ಎಂದು ಅವರು ದೂರಿದರು.

ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡರಾದ ಆಸ್ಕರ್ ಫರ್ನಾಂಡೀಸ್, ವಸಂತ್ ಸಾಲಿಯಾನ್ ಅವರ ನಿವಾಸಗಳ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಈ ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪ್ರೇಮಿಗಳ ದಿನಾಚರಣೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ