ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುರ್ಚಿ ಆಸೆಗಾಗಿ ರೈತರಿಗೆ ಅನ್ಯಾಯ ಮಾಡಲ್ಲ: ಸಿಎಂ (Yeddyurappa | BJP | Raitha sangha | Banglaore)
Bookmark and Share Feedback Print
 
ಕುರ್ಚಿಯ ಆಸೆಗಾಗಿ ನಾಡಿನ ರೈತ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಅಧಿಕಾರದಲ್ಲಿ ಇರುವವರೆಗೆ ನಾಡಿನ ನೆಲ, ಜಲ, ಭಾಷೆ ಹಿತ ಕಾಪಾಡುವುದರ ಜೊತೆಗೆ ರೈತ ಸಮುದಾಯಕ್ಕೆ ಸಿಗಲೇಬೇಕಾದ ಸವಲತ್ತುಗಳನ್ನು ದೊರಕಿಸಿಕೊಡಲು ಶ್ರಮಿಸುವುದಾಗಿ ಹೇಳಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿಕ್ಷಕರ ಸದನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರೈತ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಅಮೃತ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಬಜೆಟ್‌ನಲ್ಲಿ ರೈತರಿಗೆ ತಮ್ಮ ಇತಿಮಿತಿಯಲ್ಲಿ ಹಲವು ಸೌಲಭ್ಯ ಕಲ್ಪಿಸಲಾಗುವುದು ಎಂದ ಅವರು, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಅದಕ್ಕೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ರೈತರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬರದ ರೀತಿ ಕೆಲಸ ಮಾಡುವುದಾಗಿ ಹೇಳಿದ ಅವರು, ಈ ನಿಟ್ಟಿನಲ್ಲಿ ಪಕ್ಷಬೇಧ ಮರೆತು ಕೆಲಸ ಮಾಡಬೇಕಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ