ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧ : ಈಶ್ವರಪ್ಪ (Bbmp | Election | Bjp | Eashwarappa)
Bookmark and Share Feedback Print
 
ಬಿಬಿಎಂಪಿ ಚುನಾವಣೆಯನ್ನು ಮುಂದೂಡುವಂತೆ ರಾಜ್ಯ ಸರ್ಕಾರ ನ್ಯಾಯಾಲಯದ ಮೆಟ್ಟಿಲು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಹತ್ತುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎ.ಸ್. ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನೀಡಿರುವ ತೀರ್ಪಿಗೆ ಬದ್ಧವಾಗಿ ಚುನಾವಣೆ ನಡೆಸಲು ಬಿಜೆಪಿ ಮತ್ತು ರಾಜ್ಯ ಸರ್ಕಾರಗಳೆರಡು ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ನಿಗದಿ ಮಾಡಿರುವ ಸಮಯದೊಳಗೆ ಪಕ್ಷವು ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ತಿಳಿಸಿದ್ದು, ಚುನಾವಣೆ ಎದುರಿಸಲು ಸಜ್ಜಾಗುತ್ತಿದೆ ಎಂದು ಅವರು ತಿಳಿಸಿದರು.

ಅಲ್ಲದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿರುವುದರಿಂದ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷ ಗೆದ್ದಿದೆ. ಈ ಚುನಾವಣೆಯಲ್ಲಿಯೂ ಜನ ಗೆಲ್ಲಿಸುತ್ತಾರೆ ಎಂಬ ನಂಬಿಕೆ ತಮಗಿದೆ ನಾವೇಕೆ ಹೆದರಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ