ಯಾವ ಉದ್ದೇಶಕ್ಕಾಗಿ ಕೃಷಿ ಜಮೀನನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಡುವವರೆಗೆ ರೈತರ ಜಮೀನಿಗೆ ಸರ್ಕಾರಿ ಅಧಿಕಾರಿಗಳಿಗೆ ಪ್ರವೇಶ ನೀಡಬೇಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರ್ಕಾರ ನಿಯಮಾವಳಿಗಳನ್ನು ಗಾಳಿಗೆ ತೂರಿ ರಾಜ್ಯದ 26ಜಿಲ್ಲೆಗಳಲ್ಲಿ 1.71ಲಕ್ಷ ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ರೈತರ ಬದುಕಿನ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.
ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ರೈತರನ್ನು ಎದುರು ಹಾಕಿಕೊಂಡರೆ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಿಡಿಕಾರಿದರು.
ಅಲ್ಲದೇ, ಯಾವ ಉದ್ದೇಶದಿಂದ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ ಎಂಬುದನ್ನು ಮನವರಿಕೆ ಮಾಡಿಕೊಡುವವರೆಗೆ ಜಮೀನಿಗೆ ಸರ್ಕಾರಿ ಅಧಿಕಾರಿಗಳ ಪ್ರವೇಶ ನಿರಾಕರಿಸಿ ಎಂದು ರೈತರಿಗೆ ಕರೆ ನೀಡುವುದಾಗಿ ಘೋಷಿಸಿದರು.