ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚುನಾವಣೆ ಮತ್ತು ಪರೀಕ್ಷೆ ಒಟ್ಟಿಗೆ ನಡೆಸೋಕೆ ಆಗಲ್ಲ: ಸಿಎಂ (BJP | Yeddyurappa | Karnataka | BBMP | Supreme court)
Bookmark and Share Feedback Print
 
ಬಿಬಿಎಂಪಿ ಚುನಾವಣೆಯನ್ನು ಮಾರ್ಚ್ 30ರೊಳಗೆ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸುವ ಮೂಲಕ ರಾಜ್ಯ ಸರ್ಕಾರ ಮತ್ತೊಮ್ಮೆ ಕಾನೂನು ಸಮರಕ್ಕೆ ಮುಂದಾಗಿದೆ.

ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆ ಇರುವುದರಿಂದ ಬಿಬಿಎಂಪಿ ಚುನಾವಣೆ ಮತ್ತು ಪರೀಕ್ಷೆಯನ್ನು ಒಟ್ಟಿಗೆ ನಡೆಸುವುದು ಅಸಾಧ್ಯ ಎಂದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ಒಂದೋ ನಾವು ಚುನಾವಣೆ ನಡೆಸಬೇಕು ಇಲ್ಲವೇ ಪರೀಕ್ಷೆ ನಡೆಸಬೇಕು ಎಂದು ಚುನಾವಣೆ ಮುಂದೂಡಿಕೆ ಕುರಿತಂತೆ ಕಾರಣ ನೀಡಿರುವ ಮುಖ್ಯಮಂತ್ರಿಗಳು ಬಿಬಿಎಂಪಿ ಚುನಾವಣೆ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿಗೆ ನಾವು ಬದ್ದರಾಗಿದ್ದೇವೆ ಎಂದರು.

ಆ ನಿಟ್ಟಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಕಾಲಾವಕಾಶ ಬೇಕೆಂದು ಕೋರಿ ಸುಪ್ರೀಂಕೋರ್ಟ್‌ಗೆ ಮತ್ತೆ ಮೇಲ್ಮನವಿ ಸಲ್ಲಿಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತವಾದ ಕಾರಣ ನೀಡದೆ ಚುನಾವಣೆ ಮುಂದೂಡಿಕೆಗೆ ಯತ್ನಿಸುತ್ತಿರುವುದಕ್ಕೆ ರಾಜ್ಯ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಚುನಾವಣೆ ವಿವಾದ ಕುರಿತಂತೆ ಅಂತಿಮವಾಗಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾ.30ರೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿತ್ತು.
ಸಂಬಂಧಿತ ಮಾಹಿತಿ ಹುಡುಕಿ