ಗೋ ಹತ್ಯೆ ನಿಷೇಧಕ್ಕೆ ಮುಸ್ಲಿಮರು ವಿರೋಧಿಸಬಾರದು: ಮುಮ್ತಾಜ್
ಹಾಸನ, ಗುರುವಾರ, 18 ಫೆಬ್ರವರಿ 2010( 11:02 IST )
PTI
ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಷೇಧ ಕಾಯ್ದೆ ಕುರಿತಂತೆ ಮುಸ್ಲಿಂ ಸಮುದಾಯ ಸೇರಿದಂತೆ ಎಲ್ಲ ಜಾತಿಯವರು ಬದ್ಧರಾಗಿರಬೇಕು ಎಂದು ವಕ್ಫ್ ಸಚಿವ ಮುಮ್ತಾಜ್ ಅಲಿಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1964ರಲ್ಲಿಯೇ ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಆದರೆ ಕಾಂಗ್ರೆಸ್ ಕಾಯ್ದೆಯನ್ನು ಜಾರಿಗೆ ತಂದರೂ ಕೂಡ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿರಲಿಲ್ಲ. ಆ ನಿಟ್ಟಿನಲ್ಲಿ, ಈ ಕಾಯ್ದೆಗೆ ಬಿಜೆಪಿ ಸರ್ಕಾರ ಹೆಚ್ಚು ಒತ್ತು ಕೊಟ್ಟು ಶಿಕ್ಷೆ ಪ್ರಮಾಣವನ್ನು ಹೆಚ್ಚಿಸಿದೆ ಎಂದು ಹೇಳಿದರು.
ಅಲ್ಲದೇ ಚರ್ಚ್ ಮತ್ತು ಇತರೆ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದರು. ಇದು ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯವಾಗಿದ್ದು, ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಕೂರುವುದಿಲ್ಲ. ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದರು.