ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನುಡಿ ಹಬ್ಬಕ್ಕೆ ತೆರೆ-ಗಡಿ,ಭಾಷೆ ವಿಚಾರದಲ್ಲಿ ರಾಜಿ ಇಲ್ಲ:ಸಿಎಂ (Kannada Sahitya Sammelana | Kannada Literature | Geetha Nagabhushan)
Bookmark and Share Feedback Print
 
NRB
ನಾಡು, ನುಡಿ, ಭಾಷೆ ಹಾಗೂ ಗಡಿ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಈ ವಿಚಾರಗಳಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಸಮ್ಮೇಳನ ಕೈಗೊಳ್ಳುವ ನಿರ್ಣಯಗಳ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿವುದರೊಂದಿಗೆ ಭಾನುವಾರ ಕನ್ನಡ ನುಡಿ ಜಾತ್ರೆಗೆ ತೆರೆ ಬಿದ್ದಿದೆ.

ಇಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿದ್ದರೂ, ಅದರ ಅನುಷ್ಠಾನ ನಿರೀಕ್ಷಿತ ಮಟ್ಟದಲ್ಲಾಗುತ್ತಿಲ್ಲ. ಈ ಅನ್ಯಾಯ ಸರಿಪಡಿಸುವಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುತ್ತಲೇ ಇದೆ ಎಂದರು.

ಕನ್ನಡ ಸಾರಸ್ವತ ಲೋಕದ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು,ಸರ್ಕಾರದ ಹೋರಾಟಕ್ಕೆ ಕೈ ಜೋಡಿಸಿದರೆ, ಹೋರಾಟಕ್ಕೆ ಮತ್ತಷ್ಟು ಬಲ ಬರಲಿದೆಯೆಂದು ಅವರು ಕರೆ ನೀಡಿದರು.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಡಾ.ಗೀತಾ ನಾಗಭೂಷಣ ಅವರು ಸಾಮಾಜಿಕ ಪಿಡುಗುಗಳ ಬಗ್ಗೆ ಅತೀವ ಕಳಕಳಿ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಿದ ಅವರು ಇಂತಹ ಸಮಸ್ಯೆಗಳ ನಿವಾರಣೆಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಗೀತಾ ನಾಗಭೂಷಣ ಅವರು ದಿಟ್ಟತನದಿಂದ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ನೋವು ತಮಗೆ ಅರ್ಥವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ