ರಾಜ್ಯದ ಬಿಜೆಪಿ ಸರ್ಕಾರವನ್ನು ಲಜ್ಜೆಗೆಟ್ಟ ಸರ್ಕಾರ ಎಂದು ಕಿಡಿಕಾರಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಯಡಿಯೂರಪ್ಪ ಸುಳ್ಳು ಹೇಳುವ ಮುಖ್ಯಮಂತ್ರಿ ಎಂದು ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರು ತಮ್ಮ ಮುಂದಿನ ರಾಜಕೀಯದ ಅಳಿವು-ಉಳಿವಿಗೆ ಹೋರಾಡುತ್ತಿದ್ದು, ಆರ್ಎಸ್ಎಸ್ ಮತ್ತು ಬಜರಂಗ ದಳದ ಪ್ರಕರಣಗಳನ್ನು ಹಿಂಪಡೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದರು.
ರಾಜ್ಯಾದ್ಯಂತ ಸುವರ್ಣ ಕಾರಿಡಾರ್ ಯೋಜನೆಗಾಗಿ 1,71,000 ಎಕರೆ ಭೂಮಿಯನ್ನು ಕೆಐಎಡಿಬಿ ಮುಖಾಂತರ ಭೂಸ್ವಾಧೀನ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿರುವುದನ್ನು ವಿರೋಧಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಫೆಬ್ರುವರಿ 23ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಗೌಡರು ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.