ರೈತರ ಜಮೀನು ಭೂ ಸ್ವಾಧೀನ ವಿರೋಧಿಸಿ ಮಂಗಳವಾರ ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಬೆಂಗಳೂರು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಭೂ ಸ್ವಾಧೀನ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಭೂಸ್ವಾಧೀನದ ವಿರುದ್ಧ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು. ಪ್ರತಿಭಟನೆಯಲ್ಲಿ ರೈತರು, ರೈತಪರ ಹೋರಾಟಗಾರರು ಜೆಡಿಎಸ್ ಮುಖಂಡರು, ಕಾರ್ಯಕರ್ತರಲ್ಲದೆ ಎಡಪಕ್ಷಗಳಾದ ಸಿಪಿಐ ಹಾಗೂ ಸಿಪಿಐಎಂ ಪಾಲ್ಗೊಳ್ಳಲಿವೆ.
ನಾಳೆ ಏಕಕಾಲಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದ್ದು, ಫೆಬ್ರುವರಿ 24ರಂದು ಬೆಂಗಳೂರಿನಲ್ಲಿ ಬೃಹತ್ ಜಾಗೃತಿ ಸಮಾವೇಶ ನಡೆಯಲಿದೆ. ನೈಸ್ ಹಾಗೂ ಭೂಸ್ವಾಧೀನದ ವಿರುದ್ಧ ನಗರದ ಹೊರವಲಯದಲ್ಲಿ ಬುಧವಾರ ಜೆಡಿಎಸ್ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.