ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮತಾಂತರ ನಿಷೇಧ ಕಾಯ್ದೆ ಜಾರಿ ಇಲ್ಲ: ಆಚಾರ್ಯ (Karnataka | BJP | RSS | Acharya | Converstion)
Bookmark and Share Feedback Print
 
ಮತಾಂತರ ನಿಷೇಧ ಕುರಿತಂತೆ ರಾಜ್ಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದೆಡೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಸ್ಪಷ್ಟಪಡಿಸಿದ್ದಾರೆ.

ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ಹಲವು ಮಠಾಧೀಶರು ಸೇರಿದಂತೆ ಸಂಘಪರಿವಾರದ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿದ್ದವು. ಗೋ ಹತ್ಯೆ ನಿಷೇಧ ಜಾರಿಗೆ ಸರ್ಕಾರ ಮುಂದಾಗಿದ್ದು, ಮತಾಂತರ ನಿಷೇಧ ಕಾಯ್ದೆ ಜಾರಿ ಕುರಿತಂತೆ ಸರ್ಕಾರ ಹಿಂದೇಟು ಹಾಕುತ್ತಿದೆ.

ಮತಾಂತರ ಕಾಯ್ದೆ ನಿಷೇಧ ಮಸೂದೆಯ ಕರಡನ್ನು ಸಂಸದೀಯ ವ್ಯವಹಾರಗಳ ಇಲಾಖೆ ಗೃಹ ಇಲಾಖೆಗೆ ಕಳುಹಿಸಿದೆ ಎಂಬ ವರದಿಯಲ್ಲಿ ಹುರುಳಿಲ್ಲ ಎಂದು ಆಚಾರ್ಯ ಹೇಳಿದರು. ಇಂತಹ ಯಾವುದೇ ಪ್ರಸ್ತಾಪ ಗೃಹ ಇಲಾಖೆಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಮತಾಂತರ ನಿಷೇಧ ಕಾಯ್ದೆ ಜಾರಿ ಆಲೋಚನೆಯೂ ಸರ್ಕಾರಕ್ಕೆ ಇಲ್ಲ ಎಂದು ಆಚಾರ್ಯ ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ