ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋಮಾಂಸದ ಬಿರಿಯಾನಿ ತಿಂದು ಪ್ರತಿಭಟನೆ! (Bangalore | Samatha sainika | BJP | Yeddyurappa)
Bookmark and Share Feedback Print
 
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ವಿರೋಧಿಸಿ ಸಮತಾ ಸೈನಿಕಾದಳದ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಗೋಮಾಂಸದ ಬಿರಿಯಾನಿ, ಸಮೋಸ ತಿನ್ನುವ ಮೂಲಕ ಪ್ರತಿಭಟನೆ ನಡೆಸಿದರು.

ಸಮತಾ ಸೈನಿಕ ದಳದ ನೇತೃತ್ವದಲ್ಲಿ ದಲಿತಪರ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಸ್ಥಳದಲ್ಲಿಯೇ ಗೋಮಾಂಸದ ಅಡುಗೆಯನ್ನು ಉಂಡು ಗೋ ಹತ್ಯೆ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯ ಹಿಂದೆ ಸಂಘಪರಿವಾರದ ಹಿಡನ್ ಅಜೆಂಡಾ ಅಡಗಿದೆ ಎಂದು ಹಿರಿಯ ರಾಜಕೀಯ ಮುಖಂಡ ಎ.ಕೆ.ಸುಬ್ಬಯ್ಯ ಈ ಸಂದರ್ಭದಲ್ಲಿ ಆರೋಪಿಸಿದರು.

ಹಿಂದುಳಿದ ವರ್ಗಗಳ , ಕ್ರಿಶ್ಚಿಯನ್, ಮುಸ್ಲಿಂ ಸಮುದಾಯದವರು ಗೋ ಮಾಂಸವನ್ನು ತಿನ್ನುತ್ತಾರೆ. ಅಲ್ಲದೇ ಚರ್ಮೋದ್ಯಮಕ್ಕೂ ಕೂಡ ಅದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವ ಮುನ್ನ ರಾಜ್ಯದ ಜನರೊಂದಿಗೆ ಚರ್ಚೆ ನಡೆಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇತ್ತೀಚೆಗಷ್ಟೇ ಬೆಂಗಳೂರು ವಿವಿ ಆವರಣದಲ್ಲಿ ದಲಿತ ವಿದ್ಯಾರ್ಥಿಗಳು ಗೋಮಾಂಸದ ಅಡುಗೆಯನ್ನು ಉಂಡು, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ