ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸುಪ್ರೀಂ ಆದೇಶದಂತೆ ಹೈಕೋರ್ಟ್‌ಗೆ ಮೊರೆ: ಅಶೋಕ್ (Supreme court | BBMP | High court | Ashok | BJP)
Bookmark and Share Feedback Print
 
NRB
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ರಾಜ್ಯ ಸರ್ಕಾರ ಕೂಡಲೇ ಹೈಕೋರ್ಟ್ ಮೊರೆ ಹೋಗಲಿದೆ ಎಂದು ಬೆಂಗಳೂರು ನಗರದ ಉಸ್ತುವಾರಿ ಸಚಿವರೂ ಅಗಿರುವ ಸಾರಿಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಈ ಸಂಬಂಧ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಪರೀಕ್ಷೆ ಕಾಲ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಒಪ್ಪಿಕೊಂಡಿದೆ ಎಂದರು.

ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿ ನಮಗೆ ದೊರೆತ ತಕ್ಷಣ ಹೈಕೋರ್ಟ್‌ನಲ್ಲಿ ಚುನಾವಣೆ ಮುಂದೂಡಬೇಕೆಂದು ಕೂಡಲೇ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ