ಕೆಂಪೇಗೌಡ ಬಡಾವಣೆ ನಿರ್ಮಾಣದ ಸರ್ವೆ ಕಾರ್ಯ ನಡೆಸಲು ಹೋದ ಅಧಿಕಾರಿಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಲು ಸರ್ಕಾರ ಮತ್ತು ಬಿಡಿಎ ಕಾರಣವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೆಂಪೇಗೌಡ ಬಡಾವಣೆ ನಿರ್ಮಾಣ ವಿರೋಧಿಸಿ ಮಾಗಡಿ ರಸ್ತೆಯ ಕೊಡಿಗೇಹಳ್ಳಿ, ಗೊಲ್ಲರಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಅಹವಾಲು ಆಲಿಸಿದ ಸಿದ್ದರಾಮಯ್ಯ ಅವರು,ನೂರಾರು ವರ್ಷಗಳಿಂದ ವಾಸಿಸುತ್ತಿರುವವರನ್ನು ಒಕ್ಕಲೆಬ್ಬಿಸಿ ಬಡಾವಣೆ ನಿರ್ಮಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಗ್ರಾಮಪಂಚಾಯ್ತಿಯಿಂದ ಅನುಮತಿ ಪಡೆದು ಮನೆ ನಿರ್ಮಿಸಿಕೊಂಡು ವಿದ್ಯುತ್, ಕುಡಿಯುವ ನೀರು, ಪಡಿತರ ಚೀಟಿ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯುತ್ತಿರುವ ನಿವಾಸಿಗಳೇ ಸರ್ಕಾರದ ದುಂಡಾವರ್ತಿಗೆ ಭಯಪಡಬೇಡಿ ಎಂದು ಅಭಯ ನೀಡಿದರು.
ಕೆಂಪೇಗೌಡ ಬಡಾವಣೆಗೆ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡು ಸ್ಥಳೀಯರನ್ನು ಬಲಾತ್ಕಾರದಿಂದ ಒಕ್ಕಲೆಬ್ಬಿಸುತ್ತಿರುವುದನ್ನು ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಹೇಳಿದರು.