ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಖರೀದಿ: ಸಿಎಂ
ಬೆಂಗಳೂರು, ಬುಧವಾರ, 24 ಫೆಬ್ರವರಿ 2010( 16:14 IST )
ರಾಜ್ಯದ ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಮಾರ್ಚ್ 1ರಿಂದ 850 ಮೆಗಾವ್ಯಾಟ್ ವಿದ್ಯುತ್ ಖರೀದಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ತಿಳಿಸಿದ್ದಾರೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಿಗೆ ಸಂಬಂಧಪಟ್ಟಂತೆ 800 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಖರೀದಿಸಲಾಗುವುದು. ಇದೀಗ ನಮಗೆ 134ದಶಲಕ್ಷ ಯೂನಿಟ್ ವಿದ್ಯುತ್ ಅಗತ್ಯವಿದೆ. ಹಾಗಾಗಿ ವಿದ್ಯುತ್ ಕೊರತೆ ಸರಿದೂಗಿಸಲು ಖರೀದಿ ಅಗತ್ಯ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ದೇಶದ ಪ್ರತಿ ರಾಜ್ಯಗಳಲ್ಲೂ ಸಹ ವಿದ್ಯುತ್ ಕೊರತೆ ತೀವ್ರವಾಗಿದೆ. ಆದರೆ ಕೇಂದ್ರ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಅಭಾವದ ಸಮಸ್ಯೆ ಬಗೆಗೆ ಪ್ರತಿಪಕ್ಷಗಳು ಬೀದಿಯಲ್ಲಿ ನಿಂತು ಮಾತನಾಡುವ ಬದಲು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆಗೆ ಬರಲಿ. ತಾವು ಉತ್ತರ ಕೊಡಲು ಸಿದ್ಧ ಎಂದು ಈ ಸಂದರ್ಭದಲ್ಲಿ ಸವಾಲು ಹಾಕಿದರು.